sdpi1

 

 

ಕಾಶ್ಮೀರದ ಪಹಲ್ಗಾಮ್ ನಲ್ಲಿ  ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದ ಲಯನ್ಸ್ ವೃತ್ತದಲ್ಲಿ ಕ್ಯಾಂಡಲ್ ಲೈಟ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ರವರು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸುತ್ತಾ, ಈ ಹಿಂದೆ ಪುಲ್ವಾಮದಲ್ಲಿ ನಡೆದಂತಹ ದಾಳಿಯಿಂದ ಎಚ್ಚೆತ್ತು ಕೊಳ್ಳದ ಕೇಂದ್ರ ಸರ್ಕಾರವು, ದೇಶದ ಗಡಿಗಳನ್ನು ಭದ್ರ ಪಡಿಸದೆ ಇರುವುದೇ ಈ ಘಟನೆಗೆ ಕಾರಣ, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಈ ಘಟನೆಯಿಂದ ಮತ್ತೊಮ್ಮೆ ಸಾಬಿತಾಗಿದ್ದು, ಈ ದಾಳಿಯ ಹೊಣೆಯನ್ನು ಹೊತ್ತು ಈ ಕೂಡಲೇ ಗೃಹಮಂತ್ರಿ ಅಮಿತ್ ಷಾ ರಾಜಿನಾಮೆ ನೀಡಬೇಕು ಹಾಗೂ ಘಟನೆಯಲ್ಲಿ ಹುತಾತ್ಮರಾದ ಸಹೋದರರ ಕುಟುಂಬಕ್ಕೆ ಸರ್ಕಾರದ ವತಿಯಿಂದ 50 ಲಕ್ಷ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಹೇಳಿದರು.

ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶರೀಫ್ ರವರು ಮಾತನಾಡಿ ದೇಶವಿರೋಧಿ ಚಟುವಟಿಕೆ ಮಾಡುವವರನ್ನು ದೇಶದ ಜನತೆ ಸಹಿಸುವುದಿಲ್ಲ. ಅಮಾಯಕರ ರಕ್ತಪಾತ ಮಾಡುವ ಭಯೋತ್ಪಾದಕರ ವಿರುದ್ಧ ನಾವೆಲ್ಲರೂ ಒಂದಾಗಬೇಕು, ದೇಶದ ಶಾಂತಿಯನ್ನು ಕದಡುವ, ಕಿಡಿಗೇಡಿತನ ಮತ್ತು ಅಶಾಂತಿ ಹರಡುವವರ ವಿರುದ್ಧ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ, ಧರ್ಮ, ಜಾತಿ, ಭಾಷೆ ಎನ್ನುವ ಎಲ್ಲಾ ಭೇದಗಳನ್ನು ಮರೆತು ದೇಶದ ಏಕತೆ, ಮತ್ತು ಸಹೋದರತೆಯನ್ನು ಕಾಪಾಡಬೇಕು. ಹಿಂಸೆಯನ್ನು ಪ್ರಚೋದಿಸುವ ಮತ್ತು ದೇಶದ ವಿರುದ್ಧ ವಿಷ ಹರಡುವವರ ವಿರುದ್ಧ ದೇಶದ ಪ್ರತಿಯೊಬ್ಬರು ಏಕಮತದಿಂದ ನಿಲ್ಲಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್, ಕ್ಷೇತ್ರ ಸಮಿತಿ ಸದಸ್ಯರಾದ ಹನೀಫ್, ಶಾಹಿದ್, ಇಲ್ಯಾಸ್, ಹಿದಾಯತ್, ಆದಿಲ್, ತೌಸಿಫ್, ಅಲ್ತಾಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ