high court

 

 

ಉಚಿತ ವಿದ್ಯುತ್ ಕೊಡಿ ಎಂದು ನಿಮ್ಮನ್ನು ಯಾರು ಕೇಳಿದ್ದರು? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಪ್ರೀ ಪೇಯ್ಡ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಿರುವ ಬೆಸ್ಕಾಂ ಕ್ರಮಕ್ಕೆ ತಡೆ ನೀಡಿದೆ.

ದೊಡ್ಡಬಳ್ಳಾಪುರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಮಾಡುವಂತೆ ಒತ್ತಾಯಿಸಿ ಜಯಲಕ್ಷ್ಮೀ ಎಂಬುವರಿಗೆ ನೀಡಿದ್ದ ಸಂವಹನ ಪತ್ರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬೆಸ್ಕಾಂ ಕ್ರಮಕ್ಕೆ ತಡೆ ನೀಡಿದೆ. ಜೊತೆಗೆ, ಹೊಸದಾಗಿ ನಿರ್ಮಾಣಗೊಂಡಿರುವ ಮನೆಯೊಂದಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಸಿಕೊಳ್ಳುವಂತೆ ಬೆಸ್ಕಾಂ ನೀಡಿದ್ದ ನೋಟಿಸ್‌ಗೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲರು, ಸ್ಮಾರ್ಟ್‌ ಮೀಟರ್‌ ದೇಶದ ಬೇರೆಬೇರೆ ಕಡೆ 950 ರೂಪಾಯಿ ಇದೆ. ಆದರೆ, ನಮ್ಮಲ್ಲಿ ರೂ.8,000ಕ್ಕೂ ಅಧಿಕ ಹಣ ಸಂಗ್ರಹಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಈ ವೇಳೆ ಬೆಸ್ಕಾಂನ್ನು ತರಾಟೆಗೆ ತೆಗೆದುಕೊಂಡ ಪೀಠ, ಉಚಿತವಾಗಿ ವಿದ್ಯುತ್ ಕೊಡಿ ಎಂದು ನಿಮ್ಮನ್ನು ಯಾರು ಕೇಳಿದ್ದರು? ಏಕಾಏಕಿ ಈ ರೀತಿ ಬೆಲೆ ಏರಿಕೆ ಮಾಡಿದರೆ ಹೇಗೆ? ಎಲ್ಲರೂ ಹೆಚ್ಚು ಹಣ ಕೊಟ್ಟು ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದರೆ ಬಡವರು ಏನು ಮಾಡಬೇಕು? ಇದೆಲ್ಲವೂ ಉಚಿತ ಗ್ಯಾರಂಟಿಗಳಿಂದ ಎದುರಾಗಿರುವ ಸಮಸ್ಯೆಯೇ? ಎಂದು ಸರ್ಕಾರದ ನಿಲುವನ್ನು ಪ್ರಶ್ನಿಸಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ