ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನದ ವಾರ್ಷಿಕ ಕಲಾವಳಿ ಉತ್ಸವ ಹಾಗೂ ವಾರ್ಷಿಕ ಮಹಾ ಪೂಜೆ ವಿಜೃಂಭಣೆಯಿಂದ ನಡೆಯಿತು.
101 ದೈವಗಳಿಗೆ ದೀಪಾರಾಧನೆ, ನೈವೇದ್ಯ, ಮಹಾ ಮಂಗಳಾರತಿ, ಕಲಾಹೋಮ, ಕಲಶ ಪೂಜೆ, ಪಟ್ಟಧಾರಣೆ ಪೂಜೆ, ಕುಂಕುಮಾರ್ಚನೆ, ಹೂವಿನ ಪೂಜೆ, ನೈವೇದ್ಯ ಪೂಜೆ, ದೀಪಾರಾಧನೆ ಪೂಜೆ ಶಾಸ್ತ್ರೋಕ್ತವಾಗಿ ನೆರವೇರಿತು.
ಉತ್ಸವದ ಅಂಗವಾಗಿ ಕೊಟ್ಟಿಗೆಹಾರ, ತರುವೆ, ಬಣಕಲ್, ಅತ್ತಿಗರೆ, ಬಿನ್ನಡಿ, ಆಲೇಕಾನ್ ಹೊರಟ್ಟಿ ಸೇರಿದಂತೇ ವಿವಿಧ ಗ್ರಾಮಗಳ ಸಾವಿರಾರು ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು ಹಣ್ಣುಕಾಯಿ ಅರ್ಪಿಸಿದರು. ದೇವಸ್ಥಾನದ ಆವರಣವನ್ನು ತಳಿರು ತೋರಣ, ವಿದ್ಯುತ್ ಹಾಗೂ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾಧಿಗಳು ಇದ್ದರು.



