ಜನಗಣತಿಯ ಜೊತೆ ಜಾತಿ ಗಣತಿ ನಡೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಬೇಕೆಂದು ಇಂದು ನಿರ್ಧರಿಸಿದೆ. ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ವಿರೋಧ ಪಕ್ಷಗಳು ಬಳಸುತ್ತಿವೆ ಎಂದು ಆರೋಪಿಸಿದರು.
ಹಲವಾರು ರಾಜ್ಯಗಳಲ್ಲಿ ನಡೆಸಲಾದ ಜಾತಿ ಜನಗಣತಿ ಕಾರ್ಯವು ಅವೈಜ್ಞಾನಿಕವಾಗಿದೆ ಎಂದು ವೈಷ್ಣವ್ ದೂರಿದರು.
2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿದ್ದು 2026 ರಲ್ಲಿ ನಡೆಯುವ ಸಾಧ್ಯತೆಯಿದೆ.
ಕೇಂದ್ರದ ಈ ನಿರ್ಧಾರವನ್ನು ಕಾಂಗ್ರೇಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಸ್ವಾಗತಿಸಿವೆ


