raghu skp

 

 

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಶೃಂಗೇರಿ ಬಂದ್’ಗೆ ಸಂಚರಿಸುತ್ತಿದ್ದಾಗ ಹಿಂದೂ ಮುಖಂಡ ರಘು ಸಕಲೇಶಪುರ ಸಂಚಾರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ  ಮತ್ತು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯನ್ನು ಖಂಡಿಸಿ ಇಂದು ಚಿಕ್ಕಮಗಳೂರು ಜಿಲ್ಲೆ ಬಂದ್ ಗೆ ಕರೆನೀಡಲಾಗಿತ್ತು. ಅದತಂತೆಯೇ ಶೃಂಗೇರಿಯಲ್ಲಿ ಬಂದ್ ಹಾಗೂ ಪ್ರತಿಭಟನೆಗೆ ಕರೆ ನೀಡಲಾಗಿತ್ತು.

ಈ ಪ್ರತಿಭಟನೆಯ ಮುಖ್ಯ ಭಾಷಣಕಾರರಾಗಿ ಹಿಂದೂ ಮುಖಂಡ ರಘು ಸಕಲೇಶಪುರ ಹಾಗೂ ನಾಲ್ವರು ಕಾರ್ಯಕರ್ತರು ತೆರಳುತ್ತಿದ್ದರು.

ಚಿಕ್ಕಮಗಳೂರಿನ ಆಲ್ದೂರು ಸಮೀಪದ ತಿರುವಿನಲ್ಲಿ ಅವರು ಸಂಚರಿಸುತ್ತಿದ್ದ ಮಾರುತಿ ರಿಟ್ಜ್ ಕಾರ್ ಬ್ರೇಕ್ ಫೈಲ್ ಆಗಿದ್ದು ನಿಯಂತ್ರಣ ತಪ್ಪಿದೆ ವಾಹನ ಚಾಲಕ ಕಾರನ್ನು ನಿಯಂತ್ರಿಸಲು ಹೋಗಿ ಪಕ್ಕದ ಮಣ್ಣಿನ ಗುಡ್ಡೆಗೆ ಗುದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ರಘು ಸಕಲೇಶಪುರ ಸೇರಿದಂತೆ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳಿಯರು ತಕ್ಷಣ ಆಲ್ದೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಮಾಡಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ