6Mudigere1A

 

 

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ಮಾಡಿದ ಹತ್ಯೆ ಹಾಗೂ ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆಸಿದ ಹಿಂದೂಗಳ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಸೋಮವಾರ ಸಂಜೆ ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಅಧ್ಯಕ್ಷ ಸಂತೋಷ್ ಜನ್ನಾಪುರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಬರ್ಬರವಾಗಿ ನಡೆದಿದೆ. ರಾಜ್ಯದಲ್ಲಿ ಹಿಂದೂಗಳ ಸರಣಿ ಹತ್ಯೆ ನಡೆದರೂ ಈ ಬಗ್ಗೆ ರಾಜ್ಯ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದು ರಾಜ್ಯ ಸರಕಾರ ಮಾಡುತ್ತಿರುವ ಮುಸ್ಲಿಂ ಒಲೈಕೆಯೆ ಕಾರಣವಾಗಿದ್ದು ಮತ್ತೊಂದು ಕಡೆ ರಾಜ್ಯದಲ್ಲಿ ಗೃಹ ಇಲಾಖೆ ಮತ್ತು ಗುಪ್ತಚರ ವಿಭಾಗ ಸಂಪೂರ್ಣ ಸತ್ತುಹೋಗಿದೆ ಎಂದು ದೂರಿದರು.

ಬಿಜೆಪಿ ಮುಖಂಡ ಜೆ.ಎಸ್.ರಘು ಮಾತನಾಡಿ, ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಹಿಂದೂಗಳ ಹತ್ಯೆ ಘಟನೆ ಜನರಿಂದ ಮರೆಮಾಸುವ ಮುನ್ನವೆ ರಾಜ್ಯದಲ್ಲಿ ಹಿಂದೂಗಳ ಹತ್ಯೆ ಪ್ರಾರಂಭವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ರಾಜ್ಯ ಸರಕಾರವೇ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಂತಹ ಸರಕಾರದಿಂದ ರಾಜ್ಯದ ಜನರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲವೆಂಬುದು ಈಗಾಗಲೇ ಜನರಿಗೆ ಅರ್ಥವಾಗಿದೆ ಎಂದು ಹೇಳಿದರು.

ಮುಖಂಡರಾದ ವಿನೋಧ್ ಕಣಚೂರು, ಪಂಚಾಕ್ಷರಿ ಹಾಲೂರು, ಆದರ್ಶ ಕನ್ನಳ್ಳಿ, ಅವಿನಾಶ್ ಜನ್ನಾಪುರ, ಪರೀಕ್ಷಿತ್ ಜಾವಳಿ, ಅಭಿ ಬಣಕಲ್, ಅಜಿತ್ ಜೇನುಬೈಲ್, ಸುಜಿತ್ ಹಳೆಮೂಡಿಗೆರೆ, ಮನೋಜ್, ಪ್ರಣಿತ್, ನಿತಿನ್, ಸುಪ್ರಿತ್, ಸಂದೀಪ್ ಕೆಲ್ಲೂರು ಮತ್ತಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ