jail 2

 

 

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ   ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.

ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌  ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ.

ಏನಿದು ಪ್ರಕರಣ?
ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.

2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಗೆದ್ದಿದ್ದ ಜನಾರ್ದನ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ 2 ವರ್ಷಗಳಿಗಿಂತ ಹೆಚ್ಚು ಶಿಕ್ಷೆಯಾದರೆ ಅನರ್ಹ ಸಾಧ್ಯತೆಯಿದೆ. 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ. ಅಲ್ಲದೇ, ಸದ್ಯದ ಶಾಸಕ ಸ್ಥಾನ ಸಹ ಅನರ್ಹವಾಗಬಹುದು. ಇದೆಲ್ಲವೂ ಸಿಬಿಐ ಕೋರ್ಟ್ನ ಆದೇಶ ಜಾರಿಯಾದರೆ ಮಾತ್ರ ಸಾಧ್ಯ. ಹೈಕೋರ್ಟ್ನಿಂದ ಸ್ಟೇ ತಂದರೆ ಯಾವುದೇ ತೊಂದರೆಯಿಲ್ಲ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ