IMG-20250515-WA0175

 

 

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಗುಡ್ಡಟ್ಟಿ ಗ್ರಾಮದ ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮ ಮರ ಕಡಿತ ನಡೆದಿದೆ. ಸ್ಥಳೀಯರ ಪ್ರಕಾರ, ಬೆಲೆಬಾಳುವ ಅಕೇಶಿಯ ಮರಗಳನ್ನು ಕಡಿದು ಗುಪ್ತವಾಗಿ ಸಾಗಾಣಿಕೆ ಮಾಡಲಾಗಿದೆ.
ಸ್ಥಳೀಯರು ಈ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಕುರಿತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರಗಳ ವರವನ್ನು ವಶಪಡಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಆದರೆ ಈ ಅಕ್ರಮದಲ್ಲಿ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳೇ ಶಾಮೀಲು ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಆರೋಪದಂತೆ, ಅಧಿಕಾರಿಗಳ ಮನೆಯ ಪೀಠೋಪಕರಣಗಳಿಗಾಗಿ ಈ ಮರಗಳನ್ನು ಕಡಿತ ಮಾಡಲಾಗಿದೆ ಎನ್ನಲಾಗಿದೆ.
ಸ್ಥಳೀಯರ ಒತ್ತಾಯದ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ತನಿಖೆ ಗಂಭೀರವಾಗಿ ಕೈಗೊಳ್ಳಬೇಕೆಂದು ಬೇಡಿಕೆ ಎತ್ತಲಾಗಿದೆ. ಅರಣ್ಯ ಸಂಪತ್ತನ್ನು ಕಾಪಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ್ದು.ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು  ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ