sdpi

 

 

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರ ಮತ್ತು ಸದಸ್ಯರ ಸಮಾವೇಶವು ಬಿಳಗುಳ ಗ್ರಾಮದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಹಾಗೂ ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹಮದ್ ರವರು ಭಾಗವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ರವರು ಪ್ರಸಕ್ತ ಸನ್ನಿವೇಶದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ವಿವರಿಸಿ, SDPI ಪಕ್ಷದ ಅನಿವಾರ್ಯತೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹಮದ್ ರವರು ಕಾರ್ಯಕರ್ತರಲ್ಲಿ ಹುಮ್ಮಸ್ಸು ಹಾಗೂ ನಾಯಕತ್ವ ಬೆಳವಣಿಗೆ ಅತ್ಯಗತ್ಯ ಹಾಗೂ ಪಕ್ಷ ಸಂಘಟನೆ ಅತ್ಯುತ್ತಮವಾಗಿ ಮಾಡುವೂದರೊಂದಿಗೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಾಲ್ಗೊಂಡು ರಾಜಕೀಯವಾಗಿ ಪಕ್ಷವನ್ನು ಬಲಿಷ್ಟಗೊಳಿಸಿ ಪಕ್ಷಕ್ಕೆ ರಾಜಕೀಯ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಮುಂದುವರೆದು ಮಾತನಾಡಿದ ಅವರು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾನೂನು ಸ್ವೀಕಾರ್ಹವಲ್ಲ, ವಕ್ಫ್ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕಾಗಿದ್ದು ಈ ಕರಾಳ ಕಾನೂನು ಮುಸ್ಲಿಂ ವಿರೋಧಿ ಮಾತ್ರವಲ್ಲದೇ, ಸಂವಿಧಾನ ವಿರೋಧಿ ಸಹ ಆಗಿದೆ ಎಂದು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಆಲ್ದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶರೀಫ್ ಎಂ.ಯು, ಕಾರ್ಯದರ್ಶಿಗಳಾದ ಸಂತೋಷ್, ಮನ್ಸೂರ್, ಆಲ್ದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಆರೀಫ್ ಹುಸೇನ್, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ