Oplus_131072

Oplus_131072

 

 

ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ ಅಧಿಕಾರದ ಜೊತೆಗೆ ಮೂಲಭೂತ ಸೌಕರ್ಯಗಳು ಒಟ್ಟಿಗೆ ಸಮ್ಮಿಲನಗೊಂಡಾಗ ಆ ಪಂಚಾಯಿತಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಅಭಿಪ್ರಾಯಿಸಿದರು.

ಅವರು ಸೋಮವಾರ ಕ್ಷೇತ್ರದ ವ್ಯಾಪ್ತಿಯ ಅಂಬಳೆಯಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ವರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದ ಪರಿಣಾಮ ಕಳೆದ 5 ತಿಂಗಳಲ್ಲಿ ಗ್ರಾಮ ಪಂಚಾಯಿತಿಯ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣವಾಗಿದೆ ಎಂದು ಶ್ಲಾಘಿಸಿದ ಅವರು, ಈಗಾಗಲೇ ಕ್ಷೇತ್ರದ ವ್ಯಾಪ್ತಿಯ ಮಲೆನಾಡು ಭಾಗದಲ್ಲಿ ಹಲವಾರು ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಸಾರ್ವಜನಿಕ ಸಮರ್ಪಣೆ ಮಾಡಿದ್ದೇವೆಂದು ಹೇಳಿದರು.

ಆದರೆ, ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಸದಸ್ಯರು ಒಗ್ಗಟ್ಟಾಗಿ ಜನಪರ ಕೆಲಸ ಮಾಡುತ್ತಿರುವುದರಿಂದ ಸಮಸ್ಯೆಗಳು ನನ್ನ ಬಳಿ ಬರುವುದು ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಜೀವಿನಿ ಕಟ್ಟಡ ನಿರ್ಮಾಣವಾಗಬೇಕು, ಇದಕ್ಕೆ ಬೇಕಾದ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯ ಪರಿಸರ ಮಾಲಿನ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಮಾತನಾಡಿ, ಇತಿಹಾಸ ಹಾಗೂ ಐತಿಹಾಸಿಕವಾಗಿ ಇರುವ ದೊಡ್ಡ ಗ್ರಾಮ ಪಂಚಾಯಿತಿ ಇದಾಗಿದ್ದು, 94 ವರ್ಷಗಳ ನಂತರ ನೂತನ ಕಟ್ಟಡ ನಿರ್ಮಾಣ ಆಗಿರುವುದು ಯೋಗಾ ಯೋಗಗಳ ಫಲ ಎಂದು ಹೇಳಿದರು.

ಐತಿಹಾಸಿಕ ಹೊಯ್ಸಳ ಕಾಲದ ಶಿಲ್ಪಕಲೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಎ.ಆರ್ ಕೃಷ್ಣಶಾಸ್ತ್ರಿ ಜನಿಸಿದ ಗ್ರಾಮದಲ್ಲಿ ನೂತನ ಕಟ್ಟಡ ನಿರ್ಮಾಣವಾದ ನಂತರ ಸಾರ್ವಜನಿಕರಿಗೆ ಸಮರ್ಪಣೆಯಾಗಿ ಐಎಎಸ್, ಕೆಎಎಸ್ ಮುಂತಾದ ಸ್ಪರ್ಧಾ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರವಾಗಬೇಕು. ಜೊತೆಗೆ ಗ್ರಂಥಾಲಯವನ್ನು ಸ್ಥಾಪಿಸಿ ಗ್ರಾಮಸ್ಥರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸದ್ಭಳಕೆಯಾಗಲಿ ಎಂದು ಹಾರೈಸಿದರು.

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ ಅಧಿಕಾರ ವಿಕೇಂದ್ರೀಕರಣ ಆಗಬೇಕೆಂಬ ಕನಸು ಈ ಮೂಲಕ ನನಸಾಗಿದ್ದು, ನನ್ನ ರಾಜಕೀಯ ಬೆಳವಣಿಗೆಗೆ ಅಂಬಳೆ ಹೋಬಳಿಯ ಜನರ ಆಶೀರ್ವಾದ ಕಾರಣ ಎಂದು ಸ್ಮರಿಸಿದರು.

ಮಾಜಿ ಸಚಿವೆ ಮೋಟಮ್ಮನವರ ನೇತೃತ್ವದಲ್ಲಿ ಜಾರಿಗೆ ಬಂದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಮಹಿಳಾ ಆರ್ಥಿಕ ಸಬಲೀಕರಣಗೊಳ್ಳಲು ಪ್ರಮುಖ ಪಾತ್ರ ವಹಿಸಿದವು ಎಂದು ಹೇಳಿದರು.

ನೂತನ ಕಟ್ಟಡವನ್ನು ಉದ್ಘಾಟಿಸಿದ ಗ್ರಾ.ಪಂ ಅಧ್ಯಕ್ಷ ದೊಡ್ಡೇಗೌಡ ಮಾತನಾಡಿ, 1931 ರಲ್ಲಿ ಬ್ರಿಟೀಷ್ ಕಾಲದಲ್ಲಿ ನಿರ್ಮಾಣವಾಗಿದ್ದ ಗ್ರಾ.ಪಂ ಕಟ್ಟಡ ತುಂಬಾ ಶಿಥಿಲಗೊಂಡಿದ್ದು, 94 ವರ್ಷಗಳ ಬಳಿಕ ನೂತನ ಕಟ್ಟಡ ನಿರ್ಮಿಸಬೇಕೆಂಬ ಕನಸು ಇಂದು ನೆರವೇರಿದೆ ಎಂದರು. ಈ ಕಾರ್ಯಕ್ಕೆ ಸಹಕರಿಸಿದ ಶಾಸಕರು, ಸದಸ್ಯರು, ಗುತ್ತಿಗೆದಾರರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಭಾಗ್ಯ ಲಕ್ಷ್ಮಣಗೌಡ, ಸದಸ್ಯರುಗಳಾದ ಅಶ್ವಿನಿ ಕೆ.ಎನ್ ಮಹೇಶ್, ಗಂಗಾಧರ್ ಬಿ.ಸಿ, ಚಂದ್ರಮ್ಮ, ಮಲಿಯಮ್ಮ, ಲಕ್ಷ್ಮಮ್ಮ, ವಿಜಯಮ್ಮ, ಚಿದಾನಂದ್, ವಿಜಯ್ ಕುಮಾರ್, ಸಾವಿತ್ರಮ್ಮ, ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ಪಾರ್ವತಮ್ಮ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಪಿಡಿಓ ಗಂಗಾಧರ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ