19Mudigere1A (1)

 

 

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಮೂಡಿಗೆರೆ ತಾಲೂಕು ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿ ಸ್ಥಾನ ಆಯ್ಕೆ ಶನಿವಾರ ಪಟ್ಟಣದ ಬಿಇಒ ಕಚೇರಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸೈಯ್ಯದ್ ರಫೀ ಅಂಜುಂ, ಉಪಾಧ್ಯಕ್ಷರಾಗಿ ದೃವರಾಜ್, ಕಾರ್ಯದರ್ಶಿಯಾಗಿ ಎಂ.ಎನ್.ಶ್ರೀಕಾಂತ್ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ನಿರ್ದೇಶಕಿ ಎಚ್.ಒ.ಕಾವ್ಯ ಮಾತನಾಡಿ, ಸರಕಾರಿ ನೌಕರರಿಗೆ ಯಾವುದೇ ಸಮಸ್ಯೆ ಎದುರಾದಾಗ ಅದನ್ನು ನೌಕರರ ಸಂಘದ ಗಮನಕ್ಕೆ ಕೂಡಲೇ ತಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎಲ್ಲಾ ಕೆಲಸವನ್ನು ಪಾರದರ್ಶಕವಾಗಿ ಮಾಡಿದರೆ ಯಾರಿಗೂ ಭಯ ಪಡುವ ಅಗತ್ಯವಿರುವುದಿಲ್ಲ. ಅಲ್ಲದೇ ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಇಲಾಖೆಗಳಿಗೆ ಬಂದರೆ, ಅವರನ್ನು ಸೌಜನ್ಯದಿಂದ ಮಾತನಾಡಿಸಿ ಕೂಡಲೇ ಕೆಲಸ ಮಾಡಿಕೊಡುವ ಮೂಲಕ ಜನರ ವಿಶ್ವಾಸ ಗಳಿಸಬೇಕೆಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಸೈಯ್ಯದ್ ರಫೀ ಅಂಜುಂ ಗೌರವ ಸ್ವೀಕರಿಸಿ ಮಾತನಾಡಿ, ಬೋಧಕೇತರರು, ವಾಹನ ಚಾಲಕರು ಹಾಗೂ ಗ್ರೂಪ್ ಡಿ ನೌಕರರ ಸಂಖ್ಯೆ ತಾಲೂಕಿನಲ್ಲಿ ಕಡಿಮೆಯಿದೆ. ಕೆಲಸದ ಒತ್ತಡವಿದೆ ಎಂಬ ಕಾರಣಕ್ಕೆ ತಾಲೂಕಿಗೆ ಲಿಪಿಕ, ವಾಹನ ಚಾಲಕ ಹಾಗೂ ಗ್ರೂಪ್ ಡಿ ನೌಕರರು ತಾಲೂಕಿಗೆ ಬರಲು ಹಿಂದೇಟು ಹಾಕುತ್ತಿರುವುದು ಕಂಡು ಬರುತ್ತಿದೆ. ಹಾಗಾಗಿ ಸರಕಾರಿ ನೌಕರರಿಗೆ ಆತ್ಮಸ್ತೈರ್ಯ ತುಂಬುವ ಕಾರ್ಯ ಸಂಘಟನೆಯಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಪದಾಧಿಕಾಗಿಳ ಆಯ್ಕೆ ಪ್ರಕ್ರಿಯೆ ನಡೆಸಿ ಸರಕಾರಿ ನೌಕರರ ಎಲ್ಲಾ ಸಮಸ್ಯೆ ಬಗೆಹರಿಸಲು ತಾನು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಶಿಕ್ಷಣ ಇಲಾಖೆಯ ಅಧೀಕ್ಷಕ ಎಂ.ಎನ್.ಶಶಿಧರ್, ಡಿ.ಸಿ.ಲತಾ, ಲಾರೆನ್ಸ್ ಡಿಸೋಜಾ, ಸಿ.ಎನ್.ಆರತಿ, ಡಿ.ನವೀನ, ಎಂ.ಇತೇಶ್, ನಾಗೇಶ್, ಡಿ.ಚಂದ್ರಾವತಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ