IMG_20250523_144926_copy_864x688_1

 

 

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಯ ಸಾವಿನ ಸರಣಿ ಮುಂದುವರೆದಿದೆ.

ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಚಂದ್ರಮ್ಮ (45 ವರ್ಷ) ಎಂಬ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಶುಕ್ರವಾರ ಮುಂಜಾನೆ ತೋಟದ ಕೆಲಸಕ್ಕೆ ತೆರಳಿದ ವೇಳೆ ಕಾಡಾನೆಯೊಂದು ಕಾರ್ಮಿಕ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಸೊಂಡಲಿನಿಂದ ಎತ್ತಿ ಬಿಸಾಡಿ ಕಾಲಿನಿಂದ ತುಳಿದು ತೀವ್ರ ಗಾಯಗೊಳಿಸಿತ್ತು.

ತೀವ್ರ ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲಿ ಮಹಿಳೆ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯಿಂದ ಈ ಭಾಗದ ಸಾರ್ವಜನಿಕರು ರೊಚ್ಚಿಗೆದ್ದಿದ್ದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ