ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ನಡುವೆ ಜಟಾಪಟಿ ಪ್ರಕರಣ ನಡೆದ ಬಳಿಕ ಮೊದಲ ಬಾರಿಗೆ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ರೋಡ್ ಶೋ ನಡೆಸಿದರು.
ನಗರದಲ್ಲಿ ಶನಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ ಬೋಳ ರಾಮೇಶ್ವರ ದೇವಸ್ಥಾನದ ಆವರಣದಿಂದ ಹನುಮಂತಪ್ಪ ವೃತ್ತದ ವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಸಚಿವೆಗೆ ಜೈಕಾರ ಹಾಕಿದರು.

ಇನ್ನು ರೋಡ್ ಶೋ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ದಾರಿ ಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದರು. ಜೆಸಿಬಿ ಬಳಸಿ ಬೃಹತ್ ಹಾರ ಹಾಕುವ ಮೂಲಕ ಸಚಿವೆಗೆ ಸ್ವಾಗತಿಸುತಿದ್ದ ದೃಷ್ಯ ಸಾಮಾನ್ಯವಾಗಿತ್ತು.
ಸಚಿವೆಗೆ ಶಾಸಕರಾದ ಹೆಚ್.ಡಿ. ತಮ್ಮಯ್ಯ ಮತ್ತು ನಯನಾ ಮೋಟಮ್ಮ ಹಾಗೂ ಕಾಂಗ್ರೇಸ್ ಮುಖಂಡರು ಸಾಥ್ ನೀಡಿದರು.



