shiradi1

 

 

ನಿರಂತರ ಬಿರುಗಾಳಿ ಮಳೆಯಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ.  ರಸ್ತೆಬದಿ ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.

ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್​ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ರಸ್ತೆ ಕುಸಿತದಿಂದ ವಾಹನ ಸವಾರರು ಅಪಾಯದ ನಡುವೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆ ಆರಂಭದ ದಿನಗಳಲ್ಲಿಯೇ ಶಿರಾಡಿ ಘಾಟ್ ಪರಿಸ್ಥಿತಿ ಹೀಗಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಭೂ ಕುಸಿತದ ಭೀತಿ ಎದುರಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ