ಚಲನಚಿತ್ರ ನಿರ್ಮಾಪಕ ಉದ್ಯಮಿ ಬಿ.ವಿ ರವಿ ರೈ ಕಳಸ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇತ್ತೀಚೆಗೆ ಕಳಸ ಚಂದ್ರನಾಥಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದ ಸಂದರ್ಭದಲ್ಲಿ ನಡೆದ ರಾಜ್ಯ ಮಟ್ಟದ ಪ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ರವಿ ರೈ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರಕಟಿಸಲಾಗಿತ್ತು. ಆದರೆ ಆ ಕಾರ್ಯಕ್ರಮಕ್ಕೆ ರವಿ ರೈ ಗೈರಾಗಿದ್ದರು.ಈ ಹಿನ್ನಲೆಯಲ್ಲಿ ಪ್ರಶಸ್ತಿಯನ್ನು ಶನಿವಾರ ಕಳಸ ತಾಲ್ಲೂಕು ಕಸಾಪ ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಗೌರವ ಕಾರ್ಯದರ್ಶಿ ಸುಜಯ ಸದಾನಂದ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಮಮ್ತಾಜ್ ಬೇಗಂ, ಕಸಾಪ ಕಳಸ ಹೋಬಳಿ ಅಧ್ಯಕ್ಷ ಶೇಖರ ಶೆಟ್ಟಿ, ಕನ್ನಡ ಜಾನಪದ ಪರಿಷತ್ತು ಅಧ್ಯಕ್ಷ ಅಜಿತ್ ಪ್ರಸಾದ್, ಶರೀಫ್, ಮಲ್ಲಿಕಾರ್ಜುನ್ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿ ರೈ ನನ್ನನ್ನು ಗುರುತಿಸಿ ಗೌರವಿಸಿದ ಸಾಹಿತ್ಯ ಪರಿಷತ್ತಿಗೆ ಧನ್ಯವಾದಗಳನ್ನು ತಿಳಿಸಿದರು.



