dama 2

 

 

 

ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದ ಕೆಳಂಗಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಭವ್ಯವಾದ ಚಂದ್ರನಾಥ ಸ್ವಾಮಿ ಬಸದಿ ಮತ್ತು ಪದ್ಮಾವತಿ ದೇವಸ್ಥಾನದಲ್ಲಿ ಮೇ 18ರಿಂದ 22ರವರೆಗೆ ಧಾಮಸಂಪ್ರೋಕ್ಷಣೆ ಮತ್ತು ಪಂಚಕಲ್ಯಾಣದ ವಿಧಿಗಳು ವಿಜೃಂಭಣೆಯಿಂದ ನೆರವೇರಿದವು.

ಸುಂದರ ವಾಸ್ತುಶಿಲ್ಪದಿಂದ ನಯನಮನೋಹರವಾಗಿರುವ ಚಂದ್ರನಾಥ ಬಸದಿಯ ಪಕ್ಕದಲ್ಲೇ ಪದ್ಮಾವತಿ ದೇವಸ್ಥಾನ, ಕ್ಷೇತ್ರಪಾಲ ಗುಡಿಯನ್ನು ಲೋಕಾರ್ಪಣೆ ಮಾಡಲಾಯಿತು.

ಚಂದ್ರನಾಥ ಬಸದಿಯ ಐತಿಹಾಸಿಕ ಚಂದ್ರನಾಥ ಮೂರ್ತಿಯ ಜೊತೆಗೆ ನೂತನವಾಗಿ ಜ್ವಾಲಾಮಾಲಿನಿ ಮತ್ತು ಶ್ಯಾಮಯಕ್ಷ ಪ್ರತಿಷ್ಟಾಪನೆ, ಪದ್ಮಾವತಿ ದೇವಸ್ಥಾನದಲ್ಲಿ ನೂತನ ಪಾಶ್ರ್ವನಾಥ ತೀರ್ಥಂಕರರ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ಪಂಚಕಲ್ಯಾಣದ 5 ದಿನವೂ ಧಾರ್ಮಿಕ ವಿಧಿವಿಧಾನಗಳು ಸಂಪ್ರದಾಯಬದ್ಧವಾಗಿ ನೆರವೇರಿದವು.

18ರಂದು ರಾಜ್ಯ ಮಟ್ಟದ ಪ್ರಥಮ ಜೈನ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಶ್ರೀವರ್ಮ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಪ್ರತಿದಿನ ಮಧ್ಯಾಹ್ನ ಧಾರ್ಮಿಕ ಸಭೆಯಲ್ಲಿ ಜೈನ ಸಮಾಜದ ಹೆಸರಾಂತ ಸಾಧುಸಂತರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರತಿದಿನ ಸಂಜೆ 6ರಿಂದ ಸ್ಥಳೀಯ ಮಹಿಳೆಯರು ಮತ್ತು ವೃತ್ತಿಪರ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನೆರವೇರಿದವು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ.ಧರಣೇಂದ್ರ ಮತ್ತು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಬಸದಿ ನಿರ್ಮಾಣ ಮತ್ತು ಪಂಚಕಲ್ಯಾಣ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ನಿರಂತರ ಮಳೆಯ ನಡುವೆಯೂ ಕಾರ್ಯಕ್ರಮಗಳು ವಿಜೃಂಭಣೆಯಿಂದಲೇ ನೆರವೇರಿದವು.

ಕಳಸ ಮಾತ್ರವಲ್ಲದೇ ನಾಡಿನ ವಿವಿಧ ಭಾಗಗಳಿಂದ ಜೈನ ಬಾಂಧವರು ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದ್ದರು. ಕಳಸ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ಸಮಾಜದ ಜನರು ಐತಿಹಾಸಿಕವಾದ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ