pick up

 

 

ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು  ಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಕರಾವಳಿಯಲ್ಲಿ ಮತ್ತೊಂದು ಕೊಲೆ ನಡೆದುಹೋಗಿದೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳವಾರ  ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಮ್ ನನ್ನು ಕೊಲೆ ಮಾಡಲಾಗಿದೆ. ಇರಾಕೋಡಿ ಎಂಬಲ್ಲಿ ಮನೆಯೊಂದರ ಮುಂದೆ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ‌ಇನ್ನು ರಹೀಮ್ ಜೊತೆಗಿದ್ದ ಹನೀಫ್ ಎಂಬಾತ ಮೇಲೂ ದಾಳಿ ಮಾಡಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಬ್ದುಲ್ ರಹಿಮಾನ್  ಹತ್ಯೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್​ಗೆ ಕ್ರಮ ಕೈಗೊಳ್ಳಲಾಗಿದೆ. ಉಡುಪಿ, ಚಿಕಮಗಳೂರು, ಮೈಸೂರು, ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಪಡೆ ತರಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹೇಳಿದ್ದಾರೆ.

ಆಯಕಟ್ಟಿನ ಸ್ಥಳಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ. ಅನುಮಾನಾಸ್ಪದ ಚಟುವಟಿಕೆ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಕೊಲೆಯ ಕಾರಣ ಮತ್ತು ಆರೋಪಿಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ, ಬಂಟ್ವಾಳ ಡಿವೈವೆಸ್ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಶಂಕಿತರನ್ನು ಕರೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ