30Mudigere3A

ಸಚಿವರು, ಶಿಥಿಲಗೊಂಡಿರುವ ದೇವವೃಂದ-ಜಪಾವತಿ ಸೇತುವೆಯನ್ನು ವೀಕ್ಷಿಸಿದರು.

 

 

ರಾಜ್ಯದ 11 ಜಿಲ್ಲೆಗಳಲ್ಲಿ ಕಾಲು ಸಂಕ ನಿರ್ಮಿಸಲು ತಲಾ ಒಂದು ಕೋಟಿ ಅನುದಾನವನ್ನು ಈಗಾಗಲೇ ನೀಡಲಾಗಿದೆ. 20 ಕೋಟಿ ರೂ. ಅನುದಾನದಲ್ಲಿ 20 ಕಡೆ ಕಾಲುಸಂಕ ನಿರ್ಮಾಣ ಕಾರ್ಯ ನಡೆದಿದೆ. ಉಳಿದಂತೆ 36 ಶಾಸಕರ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಲು ತಲಾ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮೂಡಿಗೆರೆಯಿಂದ ಸಕಲೇಶಪುರಕ್ಕೆ ತೆರಳುವ 40 ಕಿ.ಮೀ. ರಸ್ತೆ ಗುಂಡಿಯಾಗಿದೆ. ಅದನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಕ್ರಿಯಾಯೋಜನೆ ತಯಾರಿಸಲಿದ್ದಾರೆ. ಆನಂತರ ಮತ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಶುಕ್ರವಾರ ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಸಮೀಪ ಪ್ಲಾಂಟರ್ಸ್ ಕೋರ್ಟಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವದಲ್ಲಿ ಆಗಿರುವ ಮಳೆಯಿಂದ ರಸ್ತೆ, ಸೇತುವೆ, ರೈತರ ಬೆಳೆ ಇತರೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಅದರ ವರದಿ ಬಂದ ಕೂಡಲೆ ಪರಿಹಾರ ಕಾರ್ಯ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅತಿವೃಷ್ಟಿ ನಿಭಾಯಿಸಲು ಎಲ್ಲ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಸೂಕ್ತ ರೀತಿಯಲ್ಲಿ ಸೂಚನೆ ನೀಡಲಿದ್ದಾರೆ. 2019 ರಿಂದ ನಿರಂತರವಾಗಿ ಅತಿವೃಷ್ಟಿ ಉಂಟಾಗಿ ಸೇತುವೆ, ರಸ್ತೆಗಳ ಹಾನಿ ಸಂಭವಿಸಿದೆ. ಅಲ್ಲಲ್ಲಿ ಗುಡ್ಡ ಕುಸಿತದಿಂದ ಜಮೀನುಗಳಿಗೆ ಹಾನಿಯಾಗಿತ್ತು. ಅವೆಲ್ಲವನ್ನು ಸರಿಪಡಿಸಲಾಗಿದೆ. ಕೆಲವೆಡೆ ಹಳೆ ಸೇತುವೆ ದೊರಸ್ತಿ ಹಾಗೂ ಹೊಸ ಸೇತುವೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.

2014ರಲ್ಲಿ ಡಾ.ಎಚ್.ಸಿ.ಮಹದೇವಪ್ಪ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ರಾಜ್ಯದ ವಿವಿಧಡೆ ನಿರ್ಮಿಸಲು 40 ಸೇತುವೆ ಮಂಜೂರು ಮಾಡಿದ್ದರು. ಅದರ ನಿರ್ಮಾಣ ಕಾಮಗಾರಿ ಹೊಣೆಯನ್ನು ಕೆಆರ್‍ಡಿಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಲ್ಲಿ 20 ಸೇತುವೆ ನಿರ್ಮಾಣ ಕಾರ್ಯ ಮುಗಿದಿದೆ. ಇನ್ನೂ 20 ಕಡೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಮೂಡಿಗೆರೆಯಿಂದ ಸಕಲೇಶಪುರಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಬೆಟ್ಟದಮನೆ ಗ್ರಾಮದಲ್ಲಿ ಹೇಮಾವತಿ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ 11 ವರ್ಷದಿಂದ ತಾಂತ್ರಿಕ ಅಡಚಣೆಯಿಂದ ಕಾಮಗಾರಿ ನಿಧಾನ ಗತಿಯಲ್ಲಿ ಸಾಗಿದೆ. ಕೆಆರ್‍ಡಿಸಿಎಲ್ ಸಂಸ್ಥೆಯನ್ನು ಲೋಕೋಪಯೋಗಿ ಇಲಾಖೆಗೆ ಸೇರ್ಪಡೆಗೊಳಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಮಲೆನಾಡು ಭಾಗದಲ್ಲಿ ಕಾಡಾನೆ ಮತ್ತಿತರ ಕಾಡುಪ್ರಾಣಿಗಳ ಸಮಸ್ಯೆ ಹೆಚ್ಚಾಗಿದೆ. ಅದಕ್ಕೆ ಅರಣ್ಯದ ಸುತ್ತ ವಾರ್ಷಿಕ 100 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೆಡ್ ನಿರ್ಮಿಸಲಾಗುವುದು. ಈಗಾಗಲೆ ಗುಂಡ್ಲುಪೇಟೆ, ಹಾಸನ ಮತ್ತಿತರೆ ಕಡೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಇರುವ ಪ್ರದೇಶದ ಅರಣ್ಯ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಿ ಆನೆಗಳನ್ನು ಕೂಡಿ ಹಾಕಬೇಕು. ಕಾಡಾನೆಗಳಿಗೆ ಅರಣ್ಯದಲ್ಲಿ ನೀರು ಮತ್ತು ಆಹಾರವಿಲ್ಲದೆ ಕಂಗಾಲಾಗಿ ನಾಡಿಗೆ ಆಹಾರ, ನೀರು ಹುಡುಕಿಕೊಂಡು ಬರುತ್ತಿದೆ. ಇದಕ್ಕೆ ಎಲಿಫ್ಯಾಂಟ್ ಕಾರಿಡಾರ್ ನಿರ್ಮಿಸುವುದೇ ಶಾಶ್ವತ ಪರಿಹಾರ ಎಂದು ಹೇಳಿದರು.

ಮಂಗಳೂರಿನಲ್ಲಿ ಅಮಾಯಕ ಯುವಕರ ಕೊಲೆ ನಡೆಯುತ್ತಿರುವ ಬಗ್ಗೆ ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಇದರಲ್ಲಿ ಸರಕಾರದ ವೈಫಲ್ಯವಿಲ್ಲ. ಆರೋಪಿಗಳ ವಿರುದ್ಧ ಸರಕಾರ ಕಠಿಣ ನಿಲುವು ತೆಗೆದುಕೊಳ್ಳಲಿದೆ. ನಕ್ಸಲ್ ನಿಗ್ರಹ ದಳವನ್ನು ಈಗಾಗಲೆ ಮಂಗಳೂರಿಗೆ ನೇಮಿಸಿದೆ. ನೈತಿಕ ಪೆÇಲೀಸ್ ಗಿರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವಂತೆ ತಂಡಕ್ಕೆ ಸೂಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡುತ್ತಿರುವ ಮುಸ್ಲಿಂ ಕಾರ್ಯಕರ್ತರು ವಾಸ್ತವ ಯೋಚನೆ ಮಾಡಬೇಕು. ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲೇ ಇದ್ದಾರೆ ಎಲ್ಲರನ್ನು ಮನ ಹೋಲಿಸುತ್ತಾರೆಂದು ಹೇಳಿದರು.

ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ನಯನಾ ಮೋಟಮ್ಮ, ಟಿ.ಡಿ.ರಾಜೇಗೌಡ ಎಚ್.ಡಿ.ತಮ್ಮಯ್ಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ