ಮುಂಗಾರು ಪೂರ್ವ ಧಾರಾಕಾರ ಮಳೆಯಿಂದಾಗಿ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮನೆ ಕುಸಿತಗೊಂಡಿದ್ದ ಸಂತ್ರಸ್ತರ ಮನೆಗೆ ಶಾಸಕಿ ನಯನಾ ಮೋಟಮ್ಮ ಅವರು ಅಧಿಕಾರಿಗಳೊಂದಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಯಿಂದ ಮನೆ ಕುಸಿತಕ್ಕೊಳಗಾದ ವಸ್ತಾರೆ ಹೋಬಳಿ ವ್ಯಾಪ್ತಿಯ ಮೈಲಿಮನೆ ಗ್ರಾಮದ ಕವಿತಾ ರವಿ, ಬಿದರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದ ಸುಶೀಲಾ ರವಿ, ಬಣಕಲ್ ಹೋಬಳಿ ವ್ಯಾಪ್ತಿಯ ತ್ರಿಪುರ ಗ್ರಾಮದ ಸುಶೀಲಾ ಗೋಪಾಲ, ಕುಸುಮಾ ಪದ್ಮಪೂಜಾರಿ, ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಕಡೆ ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿದರು. ಎಲ್ಲಾ ಸಂತ್ರಸ್ತ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಧೈರ್ಯ ತುಂಬುವ ಜತೆಗೆ ಮಳೆಯಿಂದ ಕುಸಿತಕ್ಕೊಳಗಾದ ಮನೆಗಳಿಗೆ ಸೂಕ್ತ ಪರಿಹಾರವನ್ನು ಶೀಘ್ರವಾಗಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಹಸೀಲ್ದಾರ್ ರಾಜಶೇಖರ್ ಮೂರ್ತಿ, ತಾ.ಪಂ. ಇಒ ದಯಾವತಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.



