otthuvari 3

 

 

ಚಿಕ್ಕಮಗಳೂರು ಜಿಲ್ಲೆಯ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ಬೆಳೆದಿದ್ದ ಪ್ರದೇಶವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ವಶಕ್ಕೆ ಪಡೆದಿದೆ.

ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಮುತ್ತೋಡಿ ವಲಯದ ಕೆಸವಿನ ಮನೆ ಸರ್ವೇ ನಂಬರ್ 43ರಲ್ಲಿ ನಗರದ ನರೇಂದ್ರ ಪೈ ಎಂಬುವರಿಗೆ ಸೇರಿದ ಕೆಸವಿನಮನೆ ಹಕ್ಲು ತೋಟದಲ್ಲಿ ಅಭಯಾರಣ್ಯಕ್ಕೆ ಸೇರಿದ 43 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು. ಈ ಸಂಬಂಧ 2022-23ನೇ ಸಾಲಿನಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನ್ವಯ ಪ್ರಕರಣವು ಕೂಡ ದಾಖಲಾಗಿತ್ತು.

ನ್ಯಾಯಾಲಯದ ಆದೇಶ:
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ಅವರ ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಅರಣ್ಯ ಒತ್ತುವರಿ ಅಂಶ ಸಾಬೀತಾದ ಹಿನ್ನೆಲೆಯಲ್ಲಿ ಒತ್ತುವರಿ ತೆರವುಮಾಡಿಕೊಡುವಂತೆ ಒತ್ತುವರಿದಾರರಿಗೆ  ಒಂದು ತಿಂಗಳು ಕಾಲಾವಕಾಶ ನೀಡಿ ಆದೇಶ ಮಾಡಲಾಗಿತ್ತು.

ಸದರಿ ಒತ್ತುವರಿದಾರರು ಯಾವುದೇ ಅರಣ್ಯ ಒತ್ತುವರಿ ತೆರವು ಮಾಡಿಕೊಡದ ಹಿನ್ನೆಲೆಯಲ್ಲಿ, ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ಕಳೆದ 3 ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಬೆಳೆದಿದ್ದ ಕಾಫಿ ತೆಗೆದು ಭದ್ರಾ ಅಭಯಾರಣ್ಯ ಹುಲಿ ಮೀಸಲು ಇಲಾಖಾ ವ್ಯಾಪ್ತಿಗೆ ಸದರಿ 43 ಎಕರೆ ಪ್ರದೇಶವನ್ನು ವಶಕ್ಕೆ ಪಡೆಯಲಾಗಿದೆ.

ಈ ಕಾರ್ಯಾಚರಣೆಯನ್ನು ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಸ್ಪಾಲ್ ಕ್ಷೀರಸಾಗರ ಮಾರ್ಗದರ್ಶನದಲ್ಲಿ ಭದ್ರಾ ಹುಲಿ ಮೀಸಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ನೇತೃತ್ವದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಜಗದೀಶ್ ಮೇದ, ಗೌರವ್, ಸುಧಾಕರ ಸೇರಿದಂತೆ ನೂರಾರು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ