rcb 2

 

 

ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬೆಂಗಳೂರು  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಕಾಲ್ತುಳಿತ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 11 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಬೌರಿಂಗ್ ನಲ್ಲಿ ಏಳು,ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರು ಸಾವು:ಈ ಪೈಕಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ ರವಾನಿಸಲಾಗಿದ್ದ ಏಳು ಮಂದಿ ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಓರ್ವ ದಂತ ವೈದ್ಯಕೀಯ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನ 18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ.ಈ ವೇಳೆ ಒಬ್ಬರ ಮೇಲೆ ಮತ್ತೋರ್ವರು ಹತ್ತಲು ಪ್ರಯತ್ನಿಸಿದಾಗ ಕಾಲ್ತುಳಿತ ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.   ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.  ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ದುರಂತದಲ್ಲಿ ಅಂತ್ಯವಾಗಿದೆ. ವಿಜಯೋತ್ಸವ ಕಾರ್ಯಕ್ರಮವನ್ನು ತರಾತುರಿಯಲ್ಲಿ ಮುಗಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ