bhoomik 2_page-0001

 

 

ಬುಧವಾರ ಆರ್‌ಸಿಬಿ   ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟ ಹಾಸನ ಜಿಲ್ಲೆ ಬೇಲೂರು ಮೂಲದ ಭೂಮಿಕ್ ಅಂತ್ಯಕ್ರಿಯೆ ಗುರುವಾರ ಹುಟ್ಟೂರು ಕುಪ್ಪಗೋಡಿನಲ್ಲಿ ನಡೆಯಿತು.

ಭೂಮಿಕ್ ಹುಟ್ಟೂರಾದ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೂಮಿಕ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಭೂಮಿಕ್ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು.

ಹಾಸನ ಸಂಸದ ಶ್ರೇಯಸ್ ಪಟೇಲ್ ಮತ್ತು ಬೇಲೂರು ಶಾಸಕ ಹೆಚ್.ಕೆ. ಸುರೇಶ್ ಕುಪ್ಪುಗೋಡು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಕುಪ್ಪುಗೋಡು ಮೂಲದ ಬೆಂಗಳೂರು ನಿವಾಸಿ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ ಭೂಮಿಕ್  ಕಾಲ್ತುಳಿತದಲ್ಲಿ ಕೊನೆಯುಸಿರೆಳೆದಿದ್ದರು. ಕಳೆದ ಇಪ್ಪತ್ತು ವರ್ಷಗಳಿಂದ ಡಿ.ಟಿ.ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಡಿ.ಟಿ.ಲಕ್ಷ್ಮಣ ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ. ಉದ್ದಿಮೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ನೂರಾರು ಮಂದಿಗೆ ಉದ್ಯೋಗ ನೀಡಿದ್ದಾರೆ.  ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಬುಧವಾರ ಕೂಡ ಕಾಲೇಜಿಗೆ ತೆರಳಿದ್ದರು. ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ,

ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದ ಏಕೈಕ ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಮಗನಿಗಾಗಿ ಕೋಟಿ ಕೋಟಿ ಆಸ್ತಿ ಮಾಡಿಟ್ಟಿದ್ದೇನೆ. ಈಗ ಅದನ್ನೆಲ್ಲ ಬಿಟ್ಟು ಅವನು ಹೊರಟು ಹೋಗಿದ್ದಾನೆ. ನನ್ನ ಮಗ ಬೀದಿ ಹೆಣವಾಗಿದ್ದಾನೆ. ನನ್ನ ಮಗನ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಬೇಡಿ ಎಂದು ಮೃತ ಭೂಮಿಕ್ ತಂದೆ ಆಸ್ಪತ್ರೆಯಲ್ಲಿ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ