6Mudigere4A (1)

 

 

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಸಿರು ಫೌಂಡೇಷನ್ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪರಿಸರ ಸಂರಕ್ಷಣಾ ಜಾಥಾ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಹಸಿರು ಫೌಂಡೇಷನ್ ಅಧ್ಯಕ್ಷ ರತನ್ ಊರುಬಗೆ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಮುಕ್ತ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬ ನಾಗರಿಕರು ದೃಢ ಸಂಕಲ್ಪ ಮಾಡಬೇಕು. ಪರಿಸರ ಸಂರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ಲಾಸ್ಟಿಕ್ ನಿಂದ ಮನುಕುಲದ ವಿನಾಶವಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದರು.
ಆರ್‍ಎಫ್‍ಒ ಕಾವ್ಯ ಮಾತನಾಡಿ, ಪ್ಲಾಸ್ಟಿಕ್ ನಿಯಂತ್ರಣ ತುಂಬಾ ಮುಖ್ಯವಾಗಿದೆ. ಮೂಡಿಗರೆ ತಾಲೂಕಿನಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಪ್ರಕೃತಿ ಸಂಪತ್ತು ಕೂಡ ಅಗಾಧವಾಗಿದೆ. ಪ್ರವಾಸಿಗರು ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಎಸೆಯುತ್ತಿದ್ದು, ಪರಿಸರ ಹಾನಿಯಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಪ.ಪಂ. ಸದಸ್ಯ ಅನುಕುಮಾರ್, ಪಿಎಸ್‍ಐ ಶ್ರೀನಾಥ್ ರೆಡ್ಡಿ, ಪರಿಸರ ಪ್ರೇಮಿಗಳಾದ ಕಣಚುರು ವಿನೋಧ್, ಸಂಜಯ್ ಕೊಟ್ಟಗೆಹಾರ, ಉಪ ಅರಣ್ಯ ವಲಯಾಧಿಕಾರಿಗಳಾದ ರಂಜಿತ್, ಕುಮಾರ್, ಶಿಕ್ಷಕರಾದ ಕಾರಂತ್, ಶ್ರೀನಿವಾಸ್ ಹಸಿರು ಫೌಂಡೇಷನ್ ನಿರ್ದೇಶಕರಾದ ವಿನುಪ್ರಸಾದ್, ಅಭಿಜಿತ್, ಸುನಿಲ್, ಜಯಂತ್, ಪೂರ್ಣೆಶ್, ರತನ್, ಪ್ರದೀಪ್, ಸುಮಂತ್ ಮತ್ತಿತರರದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ