lease

 

 

ಸರ್ಕಾರಿ ಜಮೀನುಗಳಲ್ಲಿ ಬೆಳೆಯುತ್ತಿರುವ ಪ್ಲಾಂಟೇಶನ್ ಬೆಳೆಗಳ ಜಮೀನುಗಳನ್ನು ಗುತ್ತಿಗೆಗೆ ನೀಡುವ ಕುರಿತು ಸಂಬಂಧಪಟ್ಟ ಬೆಳೆಗಾರರಿಂದ ಅರ್ಜಿಯನ್ನು ಸ್ವೀಕರಿಸಲು ಅವಧಿಯನ್ನು ವಿಸ್ತರಿಸಲಾಗಿದೆ. ಬೆಳೆಗಾರರ ಸಂಘಟನೆಗಳ ಒತ್ತಾಯದ ಮೇರೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಲಾಗಿತ್ತು. 2025ರ ಜುಲೈ 15 ರವರೆಗೆ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 01.01.2005ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ  ನಮೂನೆ-9 ರಲ್ಲಿ ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುವಾಗುವಂತೆ ದಿನಾಂಕ: 15.07.2025ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಸದರಿ ಅವಧಿಯಲ್ಲಿ ತಹಶೀಲ್ದಾರರು ಅರ್ಜಿಗಳನ್ನು ಸ್ವೀಕರಿಸತಕ್ಕದ್ದು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ತಂತ್ರಾಂಶದಲ್ಲಿ ಇಂಡೀಕರಿಸತಕ್ಕದ್ದು ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳು / ತಹಶೀಲ್ದಾರವರು ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ ಪ್ಲಾಂಟೇಶನ್ ಬೆಳೆಗಾರರಿಗೆ ವ್ಯಾಪಕ ಪ್ರಚಾರ ಮಾಡಿ ಅರ್ಜಿಯನ್ನು ಸಲ್ಲಿಸುವ ಕುರಿತು ಜಾಗೃತಿ ಮೂಡಿಸುವುದು, ಕಂದಾಯ ಆಯುಕ್ತರು, ಕಂದಾಯ ಆಯುಕ್ತಾಲಯ ಬೆಂಗಳೂರು ಇವರು ಸದರಿ ಸರ್ಜಿಗಳನ್ನು ಆನ್‌ಲೈನ್ ಮೂಲಕ ಸ್ವೀಕರಿಸಲು ತಂತ್ರಾಂಶದಲ್ಲಿ ಸೂಕ್ತ ಮಾರ್ಪಾಡು ಮಾಡಲು ಕೂಡಲೇ ಕ್ರಮವಹಿಸತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ ಇವರು ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ.
ಇದರಿಂದಾಗಿ ವಿವಿಧ ಕಾರಣಗಳಿಂದ ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು 2025ರ ಜುಲೈ 15 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ದೊರೆತಂತಾಗಿದೆ.
ಸರ್ಕಾರದ ಈ ಕ್ರಮವನ್ನು ಬೆಳೆಗಾರರ ಮತ್ತು ರೈತ ಸಂಘಟನೆಗಳು ಸ್ವಾಗತಿಸಿದ್ದು, ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ