rain in coffee

 

 

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಜೂನ್ 14 ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಲಾಗಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಅಂತೆಯೇ ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ