vimana 1

 

 

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ   ಪತನಗೊಂಡ ಘಟನೆ ಅಹಮದಾಬಾದ್‌ನ   ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.

ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

https://x.com/TimesNow/status/1933089119049072742?ref_src=twsrc%5Etfw%7Ctwcamp%5Etweetembed%7Ctwterm%5E1933089119049072742%7Ctwgr%5E8c028a6b67e4fb4604d264b1e0ba09c876d501c2%7Ctwcon%5Es1_c10&ref_url=https%3A%2F%2Fpublictv.in%2Fplane-carrying-passengers-crashes-in-residential-area-of-ahmedabad%2F

ಘಟನಾ ಸ್ಥಳಕ್ಕೆ  ಅಗ್ನಿ ಶಾಮಕ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಈ ಘಟನೆಯಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ.  ವಿಮಾನ  ಜನವಸತಿ ಕಟ್ಟಡದ ಮೇಲೆ ಬಿದ್ದಿದೆ. ಘಟನಾ ಸ್ಥಳದಿಂದ ಬಂದಿರುವ ಮಾಹಿತಿ ಪ್ರಕಾರ ವಿಮಾನದಲ್ಲಿ ಇದ್ದವರು ಬಹುತೇಕ ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಜೊತೆಗೆ ಕಟ್ಟಡದಲ್ಲಿ ಇದ್ದ ಜನರು ಸಹ ಸಾವನ್ನಪ್ಪಿರುವ ಸಾಧ್ಯತೆ ಇದೆ.  ಹೀಗಾಗಿ  ಸಾವು ನೋವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆಯಿದೆ.

https://x.com/timesofindia/status/1933085352178180131?ref_src=twsrc%5Etfw%7Ctwcamp%5Etweetembed%7Ctwterm%5E1933085352178180131%7Ctwgr%5E089a77df26bb0340b7a0d05102fa4b804e972fc8%7Ctwcon%5Es1_c10&ref_url=https%3A%2F%2Ftimesofindia.indiatimes.com%2Fcity%2Fahmedabad%2Fplane-crashes-in-ahmedabads-meghani-area%2Farticleshow%2F121798487.cms

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ