ಹವಾಮಾನ ಇಲಾಖೆ ಎರಡು ದಿನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜೂನ್ 13 ಮತ್ತು 14ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯ 6 ತಾಲ್ಲೂಕುಗಳ ವ್ಯಾಪ್ತಿಯ ಅಂಗನವಾಡಿಗಳಿಗೆ ದಿನಾಂಕ : 13-06-2025 ರ ಶುಕ್ರವಾರ ಮತ್ತು ದಿನಾಂಕ 14-06-2025 ರ ಶನಿವಾರ ರಜೆ ಘೋಷಣೆ ಮಾಡಿದೆ.
ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿದ್ದಾರೆ.
ಅಲ್ಲದೇ ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.



