ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಮತ್ತಿಕಟ್ಟೆ ರಸ್ತೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಕಾಡುಕೋಣ ದಾಳಿಯಿಂದ ಗಾಯಗೊಂಡಿದ್ದಾರೆ. ಕುಮಾರ್ ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದಾರೆ.
ರಾತ್ರಿ 7ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿದೆ.
ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮಲೆನಾಡಿನ ಜನರಿಗೆ ಇದೀಗ ಕಾಡು ಕೋಣಗಳ ಹಾವಳಿಯಿಂದ ನಲುಗುವಂತಾಗಿದೆ. ಹಲವಾರು ಮಂದಿ ಕಾಡುಕೋಣಗಳ ದಾಳಿಯಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ.
ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು, ಕಾರ್ಮಿಕರು, ಮಾಲೀಕರು, ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.



