skp accident copy

 

 

ಗ್ಯಾಸ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಹದಿನೈದು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ   ಜಿಲ್ಲೆ ಸಕಲೇಶಪುರ ಸಮೀಪ ಸಂಭವಿಸಿದೆ.

ಸಕಲೇಶಪುರ ಮಂಗಳೂರು ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಸಕಲೇಶಪುರ  ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.

ಚಿಂತಾಮಣಿ ಡಿಪೋದ ಸಾರಿಗೆ ಬಸ್ ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಕೆ ಎಸ್ ಆರ್ ಟಿ ಸಿ ಬಸ್ ಮತ್ತೊಂದು ವಾಹನವನ್ನು  ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್‌ಗೆ  ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾಸನ ಹಾಗೂ ಮಂಗಳೂರು ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಉಳಿದ ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ