kasapa 1

 

 

ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

ಎಸ್.ಎಸ್.ಎಲ್.ಸಿ.ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಮತ್ತು ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ತಿಪ್ಪೆರುದ್ರಪ್ಪನವರು ; ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸ್ವಸಾಮರ್ಥ್ಯದಿಂದ ಬದುಕು ರೂಪಿಸಿಕೊಳ್ಳುವ ಸ್ಥೈರ್ಯ ಸಹಜವಾಗಿಯೇ ಇರುತ್ತದೆ. ಇಂದು ವಿದ್ಯಾರ್ಥಿಗಳ ಪ್ರತಿಭೆಗೆ ಅಂಕಗಳೇ ಮುಖ್ಯ ಮಾನದಂಡವಾಗಿದೆ. ಆದರೆ ಅಂಕಗಳಿಸಿದವರು ಮಾತ್ರ ಬುದ್ದಿವಂತರು ಎಂಬುದು ತಪ್ಪು ಕಲ್ಪನೆ. ವಿದ್ಯಾರ್ಥಿಗಳಲ್ಲಿ ಸರ್ವತೋಮುಖ ಪ್ರತಿಭೆಯನ್ನು ಉತ್ತೇಜಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಯುರೇಕಾ ಅಕಾಡೆಮಿಯ ದೀಪಕ್ ದೊಡ್ಡಯ್ಯ, ಕ.ಸಾ.ಸ. ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಹೆಚ್.ಎಂ. ಶಾಂತಕುಮಾರ್, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ನವೀನ್, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ಕ.ಸಾ.ಪ. ತಾಲ್ಲೂಕು ಕಾರ್ಯದರ್ಶಿ ಪ್ರಕಾಶ್ ಬಕ್ಕಿ, ಕರ್ನಾಟಕ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷ ಎಂ.ಎಸ್. ನಾಗರಾಜು, ಕಸಾಪ ಬಣಕಲ್ ಹೋಬಳಿ ಅಧ್ಯಕ್ಷ ಲೋಕೇಶ್ ಮುಂತಾದವರು ಇದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ.ಸಾ.ಪ. ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣಗೌಡ ; ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕನ್ನಡಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಇಂದು ಕನ್ನಡ ವಿಷಯದಲ್ಲಿ ವಿವಿಧ ಶಾಲೆಗಳಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ಮೂಲಕ ಕನ್ನಡ ಭಾಷೆಗೆ ಆದ್ಯತೆಯನ್ನು ನೀಡುವ ಕೆಲಸ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಓದಿದರು ಕನ್ನಡ ಭಾಷೆಯನ್ನು ಚೆನ್ನಾಗಿ ಆಸಕ್ತಿಯಿಂದ ಕಲಿಯಬೇಕು. ನಮ್ಮ ಭಾಷೆ ವಿಶ್ವದ ಶ್ರೇಷ್ಠವಾದ ಭಾಷೆಗಳಲ್ಲಿ ಒಂದಾಗಿದೆ. ನಮ್ಮ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರದ್ದು ಆಗಿದೆ ಎಂದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ