ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಾಗರ್ ಟಿಂಬರ್ ಕಾರ್ಮಿಕರಾಗಿದ್ದು, ಇಂದು ಮಧ್ಯಾಹ್ನ ಟಿಂಬರ್ ಕೆಲಸ ಮುಗಿಸಿಕೊಂಡು ಗೋಣಿಬೀಡು ಕಡೆಯಿಂದ ಬರುತ್ತಿದ್ದಾಗ ಮುದ್ರೆಮನೆ ಬಳಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



