basrigal1

 

 

ಚಿಕ್ಕಮಗಳೂರು ಹಾಸನ ಜಿಲ್ಲೆಯ ಮಲೆನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಮಳೆಗಾಳಿ ಅಬ್ಬರ ಹೆಚ್ಚಾಗಿದ್ದು, ಅನೇಕ ಕಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯಿಂದ ಅನೇಕ ಕಡೆ ಮರಗಳು ಧರೆಗುರುಳಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯವುಂಟಾಗಿದೆ.

ಕಳಸ ತಾಲೂಕಿನ ಬಸರೀಕಲ್ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಕಳಸ-ಕಾರ್ಕಳ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ರಾಜ್ಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್  ಉಂಟಾಗಿತ್ತು.

ಅರಣ್ಯ ಅಧಿಕಾರಿಗಳು-ಕಳಸ ಪೊಲೀಸರಿಂದ ಮರ ತೆರವು ಕಾರ್ಯಚರಣ ನಡೆಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ಮರಬಿದ್ದ ಸ್ಥಳದ ಅಕ್ಕಪಕ್ಕದಲ್ಲಿ ಅಂಗಡಿ ಮುಗ್ಗಟ್ಟುಗಳು ಇದ್ದು, ಸದಾ ಜನಜಂಗುಳಿ ಇರುವ ಪ್ರದೇಶವಾಗಿದೆ. ಮರಬಿದ್ದ ಸಂದರ್ಭದಲ್ಲಿ ಅಲ್ಲಿ ಯಾರು ಇಲ್ಲದ ಕಾರಣ  ಯಾವುದೇ ಅನಾಹುತ ಸಂಭವಿಸಿಲ್ಲ

ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳಸ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾದ ಮಳೆಯಾಗುತ್ತಿದ್ದು, ಮಳೆ ಜನರನ್ನು ಹೈರಾಣಾಗಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ