ಸರ್ಕಾರವು 2025 ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಕಂತು ಕಟ್ಟಲು ತೋಟಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ, ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕುಗಳಲ್ಲಿ ದಿನಾಂಕ:24/06/2025 ರಿಂದ 31/07/2025ರ ಒಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ಅಂತಿಮ ದಿನಾಂಕ: 31-07-2025 ಆಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇಕಡ. 5.00 ರಷ್ಟಿರುತ್ತದೆ.
ಪ್ರಸಕ್ತ 2025 ಮುಂಗಾರು ಹಂಗಾಮಿನಲ್ಲಿ ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್‌ಲೈನ್ ಪೋರ್ಟಾಲ್ (samrakshane karnataka.gov.in) ಮೂಲಕ ನೋಂದಾಯಿಸಲು ಆದೇಶಿಸಲಾಗಿರುತ್ತದೆ ಮತ್ತು FRUITS ತಂತ್ರಾಂಶದಲ್ಲಿ ರೈತರ ನೋಂದಣಿ ಕಡ್ಡಾಯವಾಗಿರುತ್ತದೆ. ನೋಂದಣಿ ಸಮಯದಲ್ಲಿಯೇ ಹಿಂದಿನ ವರ್ಷಗಳು/ಋತುಗಳ ಬೆಳೆ ಸಮೀಕ್ಷೆಯ ಪ್ರಕಾರ ಅಧಿಸೂಚಿತ ಬೆಳೆ ಕಂಡು ಬಂದರೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು.
ಈ ಯೋಜನೆಯಲ್ಲಿ ಒಳಪಡಿಸಲಾಗಿರುವ ಎಲ್ಲಾ ಬೆಳೆಗಳಿಗೆ ಬೆಳೆ ಸಾಲ ಪಡೆಯುವ ರೈತರನ್ನು ಒಳಪಡಿಸಬೇಕಾಗಿರುತ್ತದೆ. ಆದರೆ, ಬೆಳೆ ಸಾಲ ಪಡೆದ ರೈತರು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮ ಯೋಜನೆಯಿಂದ ಕೈಬಿಡಲಾಗುವುದು.
ಅಡಿಕೆಗೆ ರೈತರು ಕಟ್ಟಬೇಕಾದ ವಿಮೆ ಕಂತು 1 ಎಕರೆಗೆ ರೂ. 2560-00, ಕಾಳುಮೆಣಸಿಗೆ ರೈತರು ಕಟ್ಟಬೇಕಾದ ವಿಮೆ ಕಂತು 1 ಎಕರೆಗೆ ರೂ. 940-00
ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮಾಕಂತು ಕಟ್ಟಲು ಜುಲೈ 31 ಕೊನೆ ದಿನಾಂಕವಾಗಿರುತ್ತದೆ.





