ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆಯೂ (27-06-2025) ಶುಕ್ರವಾರ ಜಿಲ್ಲೆಯ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಿದೆ.
5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ
ನಾಳೆ ಶುಕ್ರವಾರ ಒಂದು ದಿನಕ್ಕೆ ಅನ್ವಯವಾಗುವಂತೆ ಮಾತ್ರ ರಜೆ ಘೋಷಿಸಿದ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.




