vasathi

 

 

ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ  ವಿದ್ಯಾರ್ಥಿನಿಯೊಬ್ಬಳು  ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ.
ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಮಿತಾ ತನ್ನ ಚೂಡಿದಾರ್ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಾಸ್ಟೆಲ್ ನಲ್ಲಿ ಒಂದು ವರ್ಷದ ಹಿಂದೆ ಒಬ್ಬಳು ವಿದ್ಯಾರ್ಥಿನಿ ಇದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ತಿಳಿದುಬಂದಿದೆ. ಈ ಹಾಸ್ಟೆಲ್ ನಲ್ಲಿ ಮಹಿಳಾ ವಾರ್ಡನ್ ಇಲ್ಲ, ಶಾಲೆಯ ಶಿಕ್ಷಕರೇ ವಾರಕ್ಕೊಬ್ಬರು ಹಾಸ್ಟೆಲ್ ಉಸ್ತುವಾರಿ ನಡೆಸುತ್ತಿದ್ದಾರೆ ಎಂದು  ತಿಳಿದುಬಂದಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ