ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿ.ಎಸ್. ಜಯರಾಮ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 27/06/2025 ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಅರ್ಜಿ ಪರಿಶೀಲನೆ ನಡೆಸಿ, ಎಲ್ಲರಿಗೂ ಸೌಲಭ್ಯ ದೊರಕಿಸಿಕೊಡುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರಿಗೆ ಸೂಚನೆ ನೀಡಲಾಯಿತು
ಮಲೆನಾಡು ಭಾಗದಲ್ಲಿ ಬಸ್ ವ್ಯವಸ್ಥೆ ಸಕಾಲದಲ್ಲಿ ಇಲ್ಲದಿರುವುದರಿಂದ ಜನ ಸಾಮಾನ್ಯರು 4 ಚಕ್ರದ ವಾಹನ ಇಟ್ಟು ಕೊಂಡಿರುತ್ತಾರೆ. 4 ಚಕ್ರದ ವಾಹನ ಇರುವ ಬಿ.ಪಿ.ಎಲ್. ಕಾರ್ಡ್ ರದ್ದುಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲ್ಲೂಕಿನಲ್ಲಿ ಬಸ್ ವ್ಯವಸ್ಥೆ ಕಡಿಮೆ ಇದ್ದು, ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲು ಸಂಚಾರ ನಿಯಂತ್ರಕರಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಮಾತನಾಡಿದ ಬಿ.ಎಸ್.ಜಯರಾಂ ಅವರು ರಾಜ್ಯ ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಪಾಲಿಗೆ ಸಂಜೀವಿನಿಯಾಗಿವೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ಮುಂಚೂಣಿಯಲ್ಲಿದೆ. ನಮ್ಮ ಮೂಡಿಗೆರೆ ತಾಲ್ಲೂಕಿನಲ್ಲಿಯೂ ಗ್ಯಾರಂಟಿ ಯೋಜನೆಗಳು ಜನರಿಗೆ ಸಕಾಲದಲ್ಲಿ ಮತ್ತು ಸಮರ್ಪಕವಾಗಿ ತಲುಪುವಂತೆ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಅಧಿಕಾರಿಗಳು ಯಾವುದೇ ವಿಳಂಬ ಮಾಡದೇ ಜನರಿಗೆ ಯೋಜನೆಗಳನ್ನು ತಲುಪಿಸುವಲ್ಲಿ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ. ಇಓ ದಯಾವತಿ, ಗ್ಯಾರಂಟಿ ಅನುಷ್ಠಾಣ ಸಮಿತಿ ಸದಸ್ಯ ಮತ್ತು ರಾಜ್ಯ ಕ್ರೈಸ್ತರ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೋ, ಗ್ಯಾರಂಟಿ ಅನುಷ್ಠಾನ ತಾಲ್ಲೂಕು ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




