ಚಿಕ್ಕಮಗಳೂರು BSNL ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯನನ್ನಾಗಿ ಬಿಜೆಪಿ ಯುವ ಮುಖಂಡ ಶಶಿ ಆಲ್ದೂರು ಅವರನ್ನು ನೇಮಕ ಮಾಡಲಾಗಿದೆ.
ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿಯವರ ಶಿಪಾರಸ್ಸಿನ ಮೇರೆಗೆ ಶಶಿ ಆಲ್ದೂರು ಅವರನ್ನು ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಶಶಿಯವರು ಪ್ರಸ್ತುತ ಬಿಜೆಪಿ ಯುವಮೋರ್ಚಾ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದ ಪಕ್ಷದ ಕಾರ್ಯಚಟುವಟಿಕೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ನೀಡುವುದರಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಶಶಿ ; ಪ್ರಧಾನಿ ಮೋದಿಜಿಯವರ ನೇತೃತ್ವದಲ್ಲಿ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕ್ರಾಂತಿ ಮಾಡಲು ಹೊರಟಿದ್ದು ವಿಶೇಷವಾಗಿ ಸಂಸದರು ನಮ್ಮ ಜಿಲ್ಲೆಯಲ್ಲಿ ತಮ್ಮದೇ ಕಾರ್ಯ ಶೈಲಿಯಲ್ಲಿ BSNL ಗೆ ಜೀವ ತುಂಬುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಸದರ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ನನಗೂ ಹೆಮ್ಮೆ ಎನಿಸುತ್ತದೆ. ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಸೇವೆಗಳು ಉನ್ನತ ದರ್ಜೆಗೆ ಏರಲು ಸಂಪೂರ್ಣ ಸಲಹೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ತಮ್ಮನ್ನು ಬಿಎಸ್ಎನ್ಎಲ್ ಸಲಹಾ ಸಮಿತಿಗೆ ನಾಮನಿರ್ದೇಶನ ಮಾಡಲು ಪ್ರೋತ್ಸಾಹ ನೀಡಿದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ, ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ದೇವರಾಜ್ ಶೆಟ್ಟಿಯವರಿಗೆ, ಮಂಡಲ ಅಧ್ಯಕ್ಷರಾದ ರವಿ ಬಸರವಳ್ಳಿ, ಮುಖಂಡರಾದ ದೀಪಕ್ ದೊಡ್ಡಯ್ಯ ಹಾಗೂ ಜಿಲ್ಲೆಯ ಎಲ್ಲಾ ಬಿಜೆಪಿ ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.



