guard 2

 

 

ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶರತ್ ಅವರು ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಅವರ ಶವ ಪತ್ತೆಯಾಗಿದೆ.

ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು.

ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಮತ್ತೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು.

ಶುಕ್ರವಾರ ಚಿಕ್ಕಮಗಳೂರು, ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.

ಶರತ್ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ತನಿಖೆಯಿಂದ ತಿಳಿದುಬರಬೇಕಷ್ಟೇ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ