ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಶೀಘ್ರವಾಗಿ ಹೃದ್ರೋಗ ತಜ್ಞರನ್ನು ನೇಮಿಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಚಿಕ್ಕಮಗಳೂರಿನ ಶ್ರೀ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಿಲ್ಲದೆ ಎಂಟು ತಿಂಗಳು ಕಳೆದಿದ್ದು, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ಅವಲಂಬಿತವಾಗಿರುವ ಬಡವರು, ಕೂಲಿ ಕಾರ್ಮಿಕರು, ಹೃದಯ ಸಂಬಂಧಿತ ಕಾಯಿಲೆಗಳಿಗೆ ಹಾಗೂ ತುರ್ತು ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ತಜ್ಞರಿಲ್ಲದೆ ಪರದಾಡುವಂತಾಗಿದೆ.
ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಅಥವಾ ಹಾಸನ, ಶಿವಮೊಗ್ಗ, ಮಂಗಳೂರು, ಬೆಂಗಳೂರಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿ ಜಿಲ್ಲೆಯ ಸಾರ್ವಜನಿಕರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ, ಆದ್ದರಿಂದ ಶೀಘ್ರವಾಗಿ ಜಿಲ್ಲಾ ಆಸ್ಪತ್ರೆಗೆ ಹೃದ್ರೋಗ ತಜ್ಞರನ್ನು ನೇಮಿಸಿ ಜಿಲ್ಲೆಯ ಬಡ ಜನರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮೋಹನ್ ರವರ ಮುಖಾಂತರ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಆಲ್ದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ಅಜ್ನಾನ್, ಚಿಕ್ಕಮಗಳೂರು ಕ್ಷೇತ್ರ ಅಧ್ಯಕ್ಷರಾದ ಅಝ್ಮತ್ ಪಾಷ, ಉಪಾಧ್ಯಕ್ಷ ಅಬ್ರಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



