ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಎಸ್ಟೇಟ್‌ನ ತೋಟದಲ್ಲಿ ಜಾನುವಾರು ಹತ್ಯೆ ಪ್ರಕರಣ ನಡೆದಿದೆ.
ಅಸ್ಸಾಂ ಮೂಲದ 6 ಕೂಲಿ ಕಾರ್ಮಿಕರು ಜಾನುವಾರು (ಹಸು) ಹತ್ಯೆ ಮಾಡಿ ಮಾಂಸ ಮಾಡಿಕೊಂಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2025ರ ಜುಲೈ 9ರಂದು ಮರ್ಕಲ್ ಎಸ್ಟೇಟ್‌ನೊಳಗೆ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಜಾನುವಾರು ಹತ್ಯೆ ಮಾಡಿರುವ ಸ್ಥಿತಿ ಹಾಗೂ ಮಾಂಸದ ತುಂಡುಗಳು ಬಾಳೆ ಎಲೆಗಳ ಮೇಲೆ ಇಟ್ಟಿರುವುದು ಕಂಡು ಬಂದಿದೆ. ಜಾನುವಾರುವಿನ ಅಂಗಾಂಗಗಳನ್ನು ಮಣ್ಣಡಿ ಹಾಕಲು ಗುಂಡಿ ತೋಡಲಾಗಿತ್ತು. ಸ್ಥಳದಲ್ಲಿ ಯಾರೂ ಕಂಡು ಬಂದಿರಲಿಲ್ಲ.
ಜಾನುವಾರುವಿನ ತಲೆ, ಕಾಲುಗಳು, ಪೂರ್ಣ ಚರ್ಮ, ಲಿವರ್ ಮತ್ತು ಇತರ ಅಂಗಾಂಗಗಳು ಪತ್ತೆಯಾಗಿದೆ. ಅಂದಾಜು 25 ಕೆ.ಜಿ ಮಾಂಸ ಹಾಗೂ 20 ಕೆ.ಜಿ ಪಕ್ಕೆಲುಬು ಮಾಂಸವಿದೆ.ಮರದ ತುಂಡು ಮತ್ತು ಗುಂಡಿ ತೋಡಲು ಬಳಸಿದ ಗುದ್ದಲಿ ಜಪ್ತಿ ಮಾಡಲಾಗಿದೆ.
ಎಸ್ಟೇಟ್ ರೈಟರ್ ಅಭಿಲಾಷ್ ನೀಡಿದ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ್ದು ಕಾರ್ಮಿಕರಾದ ಅಜೀರ್ ಅಲೀ , ಅಕ್ಬರ್ , ಇಜಾಹುಲ್ , ಮೋಜೆರ್ ಅಲಿ ,
ಮಂಜುಲ್ ಹಕ್. ಆರೋಪಿಗಳು ಅಸ್ಸಾಂ ಮೂಲದವರು.



