vadodara 1

 

 

ಗುಜರಾತ್ ನ ವಡೋದರಾದಲ್ಲಿ ಸೇತುವೆಯ ಸ್ಲ್ಯಾಬ್‌ ಕುಸಿದು ಸಾವಿಗೀಡಾದವರ ಸಂಖ್ಯೆ 15ಕ್ಕೆ ಏರಿದೆ. ಈ ನಡುವೆ ಜನರು ದುರಂತ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ.

ವಡೋದರಾ ಜಿಲ್ಲೆಯ ಮಹಿಸಾಗರ್ ನದಿಗೆ ಅಡ್ಡಲಾಗಿ ಇರುವ ಸೇತುವೆಯ ಸ್ಲ್ಯಾಬ್‌ನ ಒಂದು ಭಾಗ ಕುಸಿದು, 15 ಮಂದಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿದ ಮರುದಿನವೇ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಉನ್ನತ ಮಟ್ಟದ ಪರಿಶೀಲನೆ ನಂತರ ರಸ್ತೆ ಮತ್ತು ಕಟ್ಟಡ (ಆರ್ & ಬಿ) ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಇತರ ಸೇತುವೆಗಳ ಸಂಪೂರ್ಣ ಪರಿಶೀಲನೆ ಮತ್ತು ಸುರಕ್ಷತಾ ಪರಿಶೀಲನೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪದ್ರಾ ತಾಲೂಕಿನಲ್ಲಿ ಕುಸಿದು ಬಿದ್ದ ಸ್ಥಳಕ್ಕೆ ರಾಜ್ಯ ಆರ್ & ಬಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ಭೇಟಿ ನೀಡಿದ ಕೆಲವೇ ಗಂಟೆಗಳ ನಂತರ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಅಪಘಾತದಲ್ಲಿ  15 ಜನರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ