rathish 1

 

 

ನೂತನವಾಗಿ ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಸಂಸ್ಥಾಪಕ ಅಧ್ಯಕ್ಷರಾಗಿ ಕೆ.ಯು ರತೀಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷರಾದ ಎಂ ಜೆ ದಿನೇಶ್,  ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷರಾದ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ ತಾಲ್ಲೂಕು ಬೆಳಗಾರರ ಸಂಘದ ಕಟ್ಟಡದಲ್ಲಿ ಶುಕ್ರವಾರ ನಡೆದ ಚಿಕ್ಕಮಗಳೂರು ಜಿಲ್ಲೆಯ 10 ಸಹಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘವು ಅಸ್ತಿತ್ವಕ್ಕೆ ಬಂದಿದ್ದು, ನೂತನ ಅಧ್ಯಕ್ಷರಾಗಿ ಕೆ ರತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ ದಿನೇಶ್ ರವರು, ಕಾಫಿ, ಕಾಳು ಮೆಣಸು, ಅಡಿಕೆ ಬೆಳೆಗಾರರ ಹಿತ ದೃಷ್ಟಿಯಿಂದ ಚಿಕ್ಕಮಗಳೂರು ಜಿಲ್ಲೆಗೆ ನೂತನ ಸಂಘಟನೆ ಅತ್ಯವಶ್ಯಕವಾಗಿದ್ದು, ಸಮಸ್ಯೆಗೆ ಸಂಘಟನೆಯೊಂದೆ ಪರಿಹಾರವಾಗಿದ್ದು, ಎಲ್ಲ ಬೆಳೆಗಾರರ ಹಿತ ಕಾಪಾಡಲು ಕಟಿಬದ್ಧರಾಗಿ ಕಾರ್ಯನಿರ್ವಹಿಸುವಂತೆ ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.

ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ ಮಾತನಾಡಿ ; ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘ ಪ್ರಾರಂಭಿಸಬೇಕು ಎಂಬುದು ಜಿಲ್ಲೆಯ ಬೆಳೆಗಾರರ ಬಹುದಿನಗಳ ಕನಸಾಗಿತ್ತು, ಅದು ಈಗ ನನಸಾಗಿದೆ. ಮುಂದೆ ಈ ಸಂಘಟನೆಯನ್ನು ಪ್ರಬಲವಾಗಿ ಕಟ್ಟಿಬೆಳೆಸಲು ಎಲ್ಲರೂ ಸಹಕಾರ ನೀಡಬೇಕು ಎಂದರು.

ರತೀಶ್ ಕುಮಾರ್

ನೂತನ ಜಿಲ್ಲಾಧ್ಯಕ್ಷರಾದ ಕೆ.ಯು ರತೀಶ್ ಕುಮಾರ್ ಚಿಕ್ಕಮಗಳೂರು ತಾಲ್ಲೂಕು ಜಕ್ಕನಹಳ್ಳಿ ಗ್ರಾಮದವರಾಗಿದ್ದ, ಉತ್ತಮ ಕಾಫಿ ಬೆಳೆಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ಕಾಫಿ ಬೆಳೆಗಾರರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ವಸ್ತಾರೆ ಹೋಬಳಿ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.  ಚಿಕ್ಕಮಗಳೂರು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ  ಕೆ.ಯು ರತೀಶ್ ಕುಮಾರ್ ಮಾತನಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧನಿದ್ದು, ಸಂಘಟನೆಯ ಹಿರಿಯರು ಇಟ್ಟಿರುವ ನಂಬಿಕೆಗೆ ದ್ರೋಹವಾಗದಂತೆ ಬೆಳೆಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಕೆ.ಜಿ.ಎಫ್. ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂ, ಕೋಮಾರ್ಕ್ ಮಾಜಿ ಅಧ್ಯಕ್ಷ ಡಿ.ಎಸ್.ರಘು ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕು ಮತ್ತು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ