14Mudigere1B

 

 

ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಂಚೂಣಿಯಲ್ಲಿರುವ ದೇಶಗಳು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅವರು ಸೋಮವಾರ ಮೂಡಿಗೆರೆ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ್ದ ಶಕ್ತಿ ಯೋಜನೆಯಡಿ 500 ಕೋಟಿ ಸ್ತ್ರೀ ಫಲಾನುಭವಿಗಳು ಉಚಿತ ಬಸ್ ಪ್ರಯಾಣ ನಡೆಸಿರುವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಯಿಂದ ಸರಕಾರಕ್ಕೆ ಒಳ್ಳೆಯ ಹೆಸರು ಬರಬಾರದೆಂದು ವಿರೋಧ ಪಕ್ಷಗಳು ಸರಕಾರದಲ್ಲಿ ಹಣವಿಲ್ಲ, ಬಸ್ಸಿಗೆ ಡೀಸೆಲ್ ಹಾಕಲು ಸಾಧ್ಯಗುತ್ತಿಲ್ಲವೆಂಬ ಟೀಕೆ ಟಿಟ್ಟಣಿಗಳು ಮಾಡುತ್ತಿದ್ದರು ಆದರೆ ನಮ್ಮ ಗ್ಯಾರಂಟಿ ಯೋಜನೆ 2 ವರ್ಷ ಯಶಸ್ವಿಯಾಗಿ ಪೂರೈಸಿದ್ದು, ಇಂದಿಗೂ ಮುಂದುವರೆದಿದ್ದರಿಂದ ಟೀಕೆಗಳಿಗೆ ಬ್ರೇಕ್ ಬಿದ್ದಂತಾಗಿದೆ. ಅಲ್ಲದೇ ಇದರ ನಡುವ ಅಭಿವೃದ್ಧಿ ಕಾರ್ಯ ಕೂಡ ವ್ಯಾಪಕವಾಗಿ ಸಾಗುತ್ತಿದೆ ಎಂದು ಹೇಳಿದರು.

ಎಷ್ಟೋ ಮಹಿಳೆಯರು ಇತರೇ ಕೆಲಸ ಕಾರ್ಯಗಳಿಗೆ ತೆರಳಲು ತನ್ನ ಸಹೋದರ ಹಾಗೂ ಪೋಷಕರ ನೆರವು ಪಡೆದು ಬಸ್ಸಿನಲ್ಲಿ ಓಡಾಡುವ ಸ್ಥಿತಿ ಉಂಟಾಗಿತ್ತು. ಆದರೆ ಬಡ ಮಹಿಳೆಯರು ಸ್ವಾವಲಂಬಿಯಾಗಬೇಕೆಂಬ ದೃಷ್ಟಿಯಿಂದ ಸರಕಾರ ದೊಡ್ಡ ಹೆಜ್ಜೆಯಿಟ್ಟು ಶಕ್ತಿ ಯೋಜನೆ ಪ್ರಾರಂಭಿಸಿತು. ಇದರಿಂದ ಕುಟುಂಬಕ್ಕೆ ಹಣ ಉಳಿತಾಯ ಜತೆಗೆ ಯಾರಿಗೂ ಹೊರೆಯಾಗದಂತೆ ಗ್ರಾಮಾಂತರ ಪ್ರದೇಶದಿಂದ ರಾಜ್ಯದ ಮೂಲೆ ಮೂಲೆಗೂ ಮಹಿಳೆಯರು ಸ್ವತಂತ್ರವಾಗಿ ತಿರುಗಾಡಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಸಾಕಷ್ಟು ಅನುಕೂಲವಾಗಿದೆ. ಇದಕ್ಕೆ ಕಾಂಗ್ರೆಸ್ ಸರಕಾರವನ್ನು ಮಹಿಳೆಯರು ಸದಾ ಸ್ಮರಿಸಬೇಕೆಂದು ಹೇಳಿದರು.

ಇದಕ್ಕೂ ಮುನ್ನ ಶಾಸಕಿ ನಯನಾ ಮೋಟಮ್ಮ ಅವರು ತಾಲೂಕಿನ ವಿವಿಧ ಗ್ರಾಮಗಳಿಗೆ ಬಸ್‍ನಲ್ಲಿ ಕುಳಿತು ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಬಸ್ಸಿನಲ್ಲಿದ್ದ ಮಹಿಳೆಯರು ಕಾಂಗ್ರೆಸ್ ಸರಕಾರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುವ ಜತೆಗೆ ಶಾಸಕರಿಗೆ ಸನ್ಮಾನಿಸಿ ಗೌರವಿಸಿದರು.

ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಪ.ಪಂ. ಅಧ್ಯಕ್ಷ ಕೆ.ವೆಂಕಟೇಶ್, ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯ ಹಂಝಾ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ