SAKTHI

 

 

ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು.

ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಇಂದು ಆಯೋಜಿಸಿದ್ದ ಶಕ್ತಿ ಯೋಜನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರು 500 ಕೋಟಿ ಟ್ರಿಪ್‌ಗಳಲ್ಲಿ ಉಚಿತವಾಗಿ ಸಂಚರಿಸಿದ ಫಲವಾಗಿ 12,669 ಕೋಟಿ ರೂ.ಗಳ ಆದಾಯ ನಿಗಮಕ್ಕೆ ಬಂದಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯ ಸರ್ಕಾರ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಶಕ್ತಿ ಯೋಜನೆ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೇವಣ್ಣ ಅವರ ಕರೆಯ ಮೇರೆಗೆ ರಾಜ್ಯಾದ್ಯಂತ ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸುವ ಮೂಲಕ ಮಹಿಳೆಯರಿಗೆ ಶಕ್ತಿ ತುಂಬಲಾಗಿದೆ. ಇದರಿಂದ ಉತ್ತಮ ಆದಾಯ ಬಂದಿದ್ದು ನಿಗಮಕ್ಕೂ ಶಕ್ತಿ ಬಂದಿದೆ ಎಂದರು.

ಚಿಕ್ಕಮಗಳೂರು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಮಲ್ಲೇಶ್‌ಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಲು ಅವಕಾಶವಾಗಿದೆ ಎಂದು ತಿಳಿಸಿದರು.

ಮುಖಂಡರಾದ ಹೆಚ್.ಪಿ.ಮಂಜೇಗೌಡ ಮಾತನಾಡಿ, ಪಂಚ ಗ್ಯಾರಂಟಿ ಶಕ್ತಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೂ ಆದಾಯ ಬರುತ್ತಿದ್ದು, ಮಹಿಳೆಯರಿಗೂ ಉತ್ತಮ ಅವಕಾಶ ಒದಗಿಸಿದಂತಾಗಿದೆ. ಮುಂದೆಯೂ ಮೂರು ವರ್ಷ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ ಎಂದು ಹೇಳಿದರು.

ಸಾರಿಗೆ ನಿಗಮದ ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಮಾತನಾಡಿ, ಜಿಲ್ಲೆಯ ಎಲ್ಲಾ ಆರು ಘಟಕಗಳ ವಾಹನಗಳಲ್ಲಿ ಇದುವರೆಗೆ ಮಹಿಳೆಯರು ಒಟ್ಟು 8.43 ಕೋಟಿ ಬಾರಿ ಉಚಿತವಾಗಿ ಸಂಚರಿಸಿದ್ದು, 322.38 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಚಿಕ್ಕಮಗಳೂರು ಘಟಕವೊಂದರಲ್ಲೇ ಒಟ್ಟು 2.25 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸಂಚರಿಸಿದ್ದು, 79.45 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.

ಫಲಾನುಭವಿಗಳ ಪರವಾಗಿ ಶೋಭಾ ಮಾತನಾಡಿ, ಶಕ್ತಿ ಯೋಜನೆಯಿಂದ ಈಗಾಗಲೇ ಮಹಿಳೆಯರು ವಿವಿಧ ದೇವಾಲಯಗಳಿಗೂ ಭೇಟಿ ನೀಡಿದ್ದಾರೆ. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದ್ದು, ಇದು ಹೀಗೇ ಮುಂದುವರಿಯಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತಲ್ಲದೆ, ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ