IMG-20250713-WA0022_copy_1490x825_1

 

 

ಪೊಲೀಸರು ಎಂದರೆ ಭಯವಲ್ಲ. ಜನರಿಗೆ ರಕ್ಷಣೆ ಮತ್ತು ದೈರ್ಯ ತುಂಬಲು ಇರುವವರು. ಪೊಲೀಸರ ನೆರವು ಬೇಕಾದಲ್ಲಿ ಯಾರೊಬ್ಬರೂ ಭಯಪಡದೆ ತುರ್ತು ಸಂಖ್ಯೆಗೆ ಕರೆ ಮಾಡಿದಲ್ಲಿ ಮರುಕ್ಷಣದಲ್ಲೆ ಭೇಟಿ ನೀಡಲಾಗುವುದು. ಪೊಲೀಸ್ ಠಾಣೆಗಳು ಸಾರ್ವಜನಿಕರಿಗಾಗಿ ಬಾಗಿಲು ತೆರೆದಿರುತ್ತದೆ ಯಾವ ಸಂದರ್ಭದಲ್ಲಿ ಕೂಡ ಠಾಣೆಗೆ ಭೇಟಿ ನೀಡಬಹುದಾಗಿದೆ ಎಂದು ಗೋಣಿಬೀಡು ಪೊಲೀಸ್ ಠಾಣೆ ಪಿಎಸ್ಐ ಹರ್ಷವರ್ಧನ್ ತಿಳಿಸಿದರು.

ಮೂಡಿಗೆರೆ  ತಾಲೂಕಿನ ಜೇನುಬೈಲು ಗ್ರಾಮದಲ್ಲಿ ಪೊಲೀಸ್ ಇಲಾಖೆಯಿಂದ ಸೋಮವಾರ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಾಗ ಪೋಕ್ಸೋ ಕಾಯ್ದೆ ಬಳಸಿಕೊಳ್ಳಲು ಅವಕಾಶವಿದೆ. ಇಂತಹ ಕಠಿಣ ಕಾಯ್ದೆಯಿಂದಾಗಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಕಡಿಮೆಯಾಗಿದೆ. ಕಾನೂನಿನ ಕುಣಿಕೆಗೆ ಬೀಳದಂತೆ ಎಚ್ಚರ ವಹಿಸಿಕೊಳ್ಳುವುದು ಅಗತ್ಯವಾಗಿದೆ. ಕಾನೂನಿನ ಅರಿವು ಎಲ್ಲರಲ್ಲೂ ಉಂಟಾಗಬೇಕು. ಕಾನೂನಿನ ಬಗ್ಗೆ ಅರಿವು ಇಲ್ಲದಿದ್ದರೆ ಸಮಾಜದಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಕಾನೂನಿನ ತಿಳುವಳಿಕೆ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ಸಾಕಷ್ಟು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಕಾನೂನಿನ ಅರಿವು ಮೂಡಿಸುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಇಳಿಮುಖವಾಗಲಿದೆ. ಮಹಿಳೆಯರು ಒಂಟಿಯಾಗಿ ಹೋಗುವಾಗ ಸರಗಳ್ಳತನ ನಡೆಯುತ್ತದೆ. ಅಂತಹ ಸಂದರ್ಭದಲ್ಲಿ ಮಹಿಳೆಯರು 112 ಸಂಖ್ಯೆಗೆ ಕರೆ ಮಾಡಿದರೆ ಪೊಲೀಸರು ಅದೆ ಸ್ಥಳಕ್ಕೆ ಹಾಜರಾಗುತ್ತಾರೆ. ತುರ್ತು ಸಂದರ್ಭದಲ್ಲಿ ಮಹಿಳೆಯರು ಭಯಪಡದೆ ಪೊಲೀಸರನ್ನು ಸಂಪರ್ಕಿಸಬೇಕು. ಮೊಬೈಲ್ ಫೋನ್ ಬಳಕೆ ವಿಧಾನದಿಂದಾಗಿ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಅಪರಿಚಿತ ಕರೆಗಳು ಬಂದರೆ ಬ್ಯಾಂಕ್ ಖಾತೆ, ಮನೆ ವಿಳಾಸ ಸೇರಿದಂತೆ ವಯಕ್ತಿಕ ಮಾಹಿತಿಗಳನ್ನು ನೀಡಬಾರದು. ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೆಲ್ಮೆಟ್ ಧರಿಸದೆ ಬೈಕ್ ಸಂಚಾರ, ಸೀಟ್ ಬೆಲ್ಟ್ ಧರಿಸದೆ ಕಾರು ಚಾಲನೆಯಿಂದ ಜೀವ ಹಾನಿಯಾಗುವ ಸಾಧ್ಯತೆ ಜೊತೆಗೆ ಹೆಲ್ಮೆಟ್, ಸೀಟ್ ಬೆಲ್ಟ್ ರಹಿತ ವಾಹನ ಚಾಲನೆ ಕಾನೂನಿನ ಪ್ರಕಾರ ಅಪರಾಧವಾಗಿದೆ ಎಂದು ತಿಳಿಸಿದರು.

ಪೋಕ್ಸೋ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಪೋಕ್ಸೋ ಕಾಯ್ದೆ ಬಗ್ಗೆ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಲಾಗುತ್ತದೆ. ಪೋಷಕರು ಕೂಡ ತಮ್ಮ ಮಕ್ಕಳಿಗೆ ಅರಿವು ಮೂಡಿಸಬೇಕು. ಗಾಂಜಾ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಗಾಂಜಾ ಸೇವನೆ ಮತ್ತು ಮಾರಾಟ ಕಾನೂನಿನ ಪ್ರಕಾರ ಅಪರಾಧ, ಅಂತಹ ದುಶ್ಚಟಗಳಿಗೆ ಯಾರೊಬ್ಬರೂ ಬಲಿಯಾಗಬಾರದು ಎಂದು ತಿಳಿಸಿದರು.

ಗ್ರಾಮದ ಮುಖಂಡರಾದ ನಾಗೇಶ್, ಕೆಂಚಯ್ಯ, ಸುರೇಶ್, ಪೊಲೀಸ್ ಸಿಬ್ಬಂದಿಗಳಾದ ಸುನಿಲ್, ಅಶ್ವಿನಿ ಇತರರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ