Screenshot_2025-07-17-10-10-16-50_40deb401b9ffe8e1df2f1cc5ba480b12_copy_1080x855_1

 

 

ಕಾರ್ಕಳ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ ಅವರು ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು ಹಾಗೂ ಆರ್.ಎಸ್.ಎಸ್.ನಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು.

ಮೃತರು ಪತ್ನಿ, ಪುತ್ರ ಮಾಜಿ ಸಚಿವ ಹಾಲಿ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವು ಗುರುವಾರ ಅಪರಾಹ್ನ 1 ಗಂಟೆಗೆ ಮಣಿಪಾಲದಿಂದ ನಿಟ್ಟೆ ಗ್ರಾಮದ ಕಲಂಬಾಡಿಗೆ ತರಲಾಗುವುದು. ಸಂಜೆ 4 ಗಂಟೆಗೆ ಅಂತಿಮ ವಿಧಿವಿಧಾನಗಳು ಕುಟು೦ಬಸ್ಥರ ಉಪಸ್ಥಿತಿಯಲ್ಲಿ ನೆರವೇರಲಿದೆಂದು ಕುಟುಂಬ ಮೂಲಗಳು ತಿಳಿಸಿವೆ.

ವಾಸುದೇವ ಅವರು ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. 80 ಮತ್ತು 90ರ ದಶಕದಲ್ಲಿ ಮೂಡಿಗೆರೆ, ಬಾಲಕಿಯರ ಪದವಿ ಪೂರ್ವ ಕಾಲೇಜ್ ಹಾಗೂ ಆಲ್ದೂರು ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.

ಆ ಸಂದರ್ಭದಲ್ಲಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾ ಅನುಯಾಯಿಯಾಗಿದ್ದರು. ಮೂಡಿಗೆರೆ ಮತ್ತು ಆಲ್ದೂರು ಭಾಗದಲ್ಲಿ ಅತ್ಯಂತ ಜನಾನುರಾಗಿಯಾದ್ದರು.

ತಮ್ಮ ನಿವೃತ್ತಿಯ ನಂತರ ಅವರು ಕಾರ್ಕಳಾದ ತಮ್ಮ ಸಗ್ರಾಮದಲ್ಲಿ ನೆಲೆಸಿದ್ದರು.

ಆಲ್ದೂರಿನಲ್ಲಿ ಶಿಕ್ಷಕರಾಗಿದ್ದ ಸಂದರ್ಭ, ಎಡದಿಂದ ಮೂರನೆಯವರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ