IMG-20250717-WA0019_copy_626x788_1

 

 

ಮೂಡಿಗೆರೆ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಂ. ಅಬ್ದುಲ್ ರೆಹಮಾನ್ (78 ವರ್ಷ) ನಿಧನರಾಗಿದ್ದಾರೆ.

M M ಅಬ್ದುಲ್ ರೆಹಮಾನ್ ಇಂದು ಬೆಳಿಗ್ಗೆ 8-05 ಕ್ಕೆ ಅನಾರೋಗ್ಯ ನಿಮಿತ್ತ ನಿಧನ ಹೊಂದಿರುತ್ತಾರೆಂದು ಕುಟುಂಬ ಮೂಲಗಳು ತಿಳಿಸಿವೆ.

ರೆಹಮಾನವರು ಮಂಗಳೂರಿನ ವೆಸ್ಟ್ ಲೈನ್ ಬಿಲ್ಡರ್ಸ್ ಸಂಸ್ಥೆಯ ಮಾಲೀಕರಾಗಿದ್ದರು. ಹಿಂದೆ ಮೂಡಿಗೆರೆ ಪುರಸಭಾ ಅಧ್ಯಕ್ಷರಾಗಿ ಹಾಗೂ ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾಗಿ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾರ್ವಜನಿಕ ಕಾರ್ಯಗಳಿಗೆ ಅಪಾರ ದೇಣಿಗೆ ನೀಡಿದ್ದರು.

ರೆಹಮಾನ್ ಅವರ ನಿಧನಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ, ಮಾಜಿ ಸಚಿವರಾದ ಶ್ರೀಮತಿ ಮೋಟಮ್ಮ, ಬಿ ಬಿ ನಿಂಗಯ್ಯ, ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಜಿ ಸುರೇಂದ್ರ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಗ್ಯಾರಂಟಿ ಸಮಿತಿ ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಬಿ.ಎಸ್ ಜಯರಾಮ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ