October 26, 2026
;
19Mudigere1A

 

 

ದಲಿತರ ಭೂಮಿ, ವಸತಿ, ಹಕ್ಕು ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ತಾಲೂಕು ಸಮಿತಿ ಮುಖಂಡರು ಶುಕ್ರವಾರ ಮೂಡಿಗೆರೆ ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ್ ಮಾತನಾಡಿ, ಮೀಸಲು ಕ್ಷೇತ್ರದಲ್ಲಿಯೇ ದಲಿತರು ಸ್ಮಶಾನ, ನಿವೇಶನ, ಮನೆ, ಜಮೀನಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಇದರ ನಡುವೆ ರಾಜ್ಯ ಸರಕಾರ ಭೂ ಮಾಲೀಕರಿಗೆ ಗುತ್ತಿಗೆ ಆಧಾರದ ಮೇಲೆ ಜಮೀನು ನೀಡಲು ಮುಂದಾಗಿದೆ. ಸರಕಾರಕ್ಕೆ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲವೆಂದು ದೂರಿದರು.

ತಾಲೂಕು ಸಂಚಾಲಕ ಸಂತೋಷ್ ಮಾತನಾಡಿ, ರಾಜ್ಯ ಸರಕಾರಕ್ಕೆ ದಲಿತರ ಮೇಲೆ ಕಾಳಜಿ ಇದಿದ್ದರೆ ದಲಿತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಿತ್ತು. ಹಾಗಾಗಿ ಸರಕಾರವನ್ನು ಎಚ್ಚರಿಸಲು ರಾಜ್ಯದ ಎಲ್ಲಾ ತಾಲೂಕಿನಲ್ಲಿ ದಲಿತರ ಹಕ್ಕೊತ್ತಾಯಕ್ಕಾಗಿ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಧರಣಿಯಲ್ಲಿ ನಾಗೇಶ್ ಮೇರಿ, ಪ್ರಮಿಳಾ, ಕಾವ್ಯ, ಸ್ಪಂಧನಾ, ಸುಮಿತ್ರಾ, ಮತ್ತಿತರಿದ್ದರು.

 

 

Leave a Reply

Your email address will not be published. Required fields are marked *