sit

 

 

ಧರ್ಮಸ್ಥಳ ಪರಿಸರದಲ್ಲಿ ಶವಗಳ ಹೂತಿರುವುದಾಗಿ ವ್ಯಕ್ತಿಯೊಬ್ಬರು ಹೇಳಿಕೆ ನೀಡಿರುವ ಪ್ರಕರಣದ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ.

ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.

ಧರ್ಮಸ್ಥಳಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿ ನೂರಾರು ಅಪರಿಚಿತ ಶವ ಹೂತಿದ್ದೇನೆ ಎಂದು ಹೇಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ರಾಜ್ಯ ಮಹಿಳಾ ಆಯೋಗ ಮತ್ತು ವಕೀಲರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು. ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.

ಏನಿದು ಪ್ರಕರಣ?

ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟಿದ್ದೆ ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ತನ್ನ ವಕೀಲರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದ ಮುಸುಕುದಾರಿ ವ್ಯಕ್ತಿ ನ್ಯಾಯಾದೀಶರ ಮುಂದೆ ಹೇಳಿಕೆ ನೀಡಿದ್ದಾನೆ. ತಾನು ಹೂತಿಟ್ಟಿರುವ ಶವಗಳನ್ನು ತೋರಿಸಲು ಸಿದ್ದನಿದ್ದೇನೆ ಎಂದು ಹೇಳಿಕೊಂಡಿದ್ದಾನೆ.  ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಪ್ರಕರಣದ ಗಂಭೀರತೆಯನ್ನು ಅರಿತು ಈಗ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ವಿಶೇಷ ತನಿಖಾ ತಂಡವು ಕೇವಲ ವ್ಯಕ್ತಿಯ ಹೇಳಿಕೆಗೆ ಸಂಬಂಧಿಸಿದಂತೆ ಮಾತ್ರ ತನಿಖೆ ನಡೆಸಲಿದ್ದು, ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ