hinniru

 

 

ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ  ಘಟನೆ ಮೈಸೂರು ತಾಲೂಕು ಮೀನಾಕ್ಷಿಪುರದ ಹಿನ್ನೀರಿನಲ್ಲಿ ನಡೆದಿದೆ.

ಪ್ರಶಾಂತ್, ಸಿದ್ದ, ಕೃಷ್ಣ ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಗಳು. ಮಂಡ್ಯ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮೀನಾಕ್ಷಿಪುರಕ್ಕೆ ಬಂದಿದ್ದ ವೇಳೆ ಘಟನೆ ಸಂಭವಿಸಿದೆ.  ಮೈಸೂರು ಇಳವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಇತ್ತೀಚೆಗೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಗಳು, ಯುವಕರು ಸಾವನ್ನಪ್ಪುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಆದರೂ ಸಹ ಜನರು ಎಚ್ಚೆತ್ತುಕೊಂಡಿಲ್ಲ. ಕೆಲ ದಿನಗಳ ಹಿಂದಷ್ಟೇ ಮಂತ್ರಾಲಯದಲ್ಲಿ ಹಾಸನ ಮೂಲದ ಮೂವರು ವಿದ್ಯಾರ್ಥಿಗಳು ತುಂಗಾಭದ್ರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಮೈಸೂರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಪೋಷಕರು ಮತ್ತು ವಿದ್ಯಾರ್ಥಿಗಳು ಈ ಬಗ್ಗೆ ಇನ್ನಷ್ಟು ಜಾಗೃತರಾಗಬೇಕು. ನೀರಿನ ಬಳಿ ಹೋಗುವಾಗ, ಈಜಿನಲ್ಲಿ ಪ್ರಾವಿಣ್ಯತೆ ಇಲ್ಲದೇ ಅಪಾಯಕಾರಿ ಸಾಹಸಕ್ಕೆ ಮುಂದಾಗುವುದನ್ನು ತಡೆಯಬೇಕಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ